ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Budget 2024-25: ಕಾಂಗ್ರೆಸ್ ಪ್ರಣಾಳಿಕೆ ಓದಿದ್ದಕ್ಕೆ ಧನ್ಯವಾದ ಎಂದ ಚಿದಂಬರಂ

Published 23 ಜುಲೈ 2024, 7:35 IST
Last Updated 23 ಜುಲೈ 2024, 7:35 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್‌ನ 2024 ರ ಪ್ರಣಾಳಿಕೆಯನ್ನು ಓದಿರುವುದು ನನಗೆ ಖುಷಿ ತಂದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಮಂಗಳವಾರ ಕೇಂದ್ರ ಬಜೆಟ್ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಇಂದು 2024–25ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಚಿದಂಬರಂ, ‘ಕಾಂಗ್ರೆಸ್ ಪ್ರಣಾಳಿಕೆಯ ಪುಟ 30 ರಲ್ಲಿ ವಿವರಿಸಿರುವ ಉದ್ಯೋಗಕ್ಕೆ ಉತ್ತೇಜನ ನೀಡುವ ವಿಚಾರವನ್ನು ಬಜೆಟ್‌ನಲ್ಲಿ ಅಳವಡಿಸಿಕೊಂಡಿದ್ದಾರೆ. ಇದು ನನಗೆ ಸಂತೋಷ ನೀಡಿದೆ. ಅದರ ಜತೆಗೆ ಕಾಂಗ್ರೆಸ್‌ ಪ್ರಣಾಳಿಕೆಯ ಪುಟ 11 ರಲ್ಲಿ ನಮೂದಿಸಿರುವ ಅಪ್ರೆಂಟಿಸ್‌ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಇತರ ಕೆಲವು ವಿಚಾರಗಳನ್ನು ಸಚಿವರು ಆಯವ್ಯಯದಲ್ಲಿ ನಕಲು ಮಾಡಿದ್ದಾರೆ. ತಪ್ಪಿದ ಅಂಶಗಳನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT