ನವದೆಹಲಿ: ಈ ಬಾರಿ ಬಜೆಟ್‌ನಲ್ಲಿ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂರು ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಯೋಜನೆಗಳು ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಒ) ನೋಂದಣಿಯ ಆಧಾರದಲ್ಲಿ ಇರಲಿದೆ.

ಯೋಜನೆ ‘ಎ’: ಎಲ್ಲಾ ವಲಯಗಳಲ್ಲಿ ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ಒಂದು ತಿಂಗಳ ವೇತನ ನೀಡಲಾಗುವುದು.

ಯೋಜನೆ ‘ಬಿ’: ಉದ್ಯೋಗಿಗಳ ಉದ್ಯೋಗಕ್ಕೆ ಸಂಬಂಧಿಸಿದ ಉತ್ಪಾದನಾ ವಲಯಕ್ಕೆ ಹೆಚ್ಚುವರಿ ಉತ್ತೇಜನ ನೀಡುವುದು.

ಇದರಡಿ ಉದ್ಯೋಗದ ಮೊದಲ ನಾಲ್ಕು ವರ್ಷಗಳಲ್ಲಿ ಇಪಿಎಫ್ಒ ಕೊಡುಗೆಗೆ ಸಂಬಂಧಿಸಿದಂತೆ ಉದ್ಯೋಗಿ ಮತ್ತು ಉದ್ಯೋಗದಾತರಿಗೆ ನೇರವಾಗಿ ನಿರ್ದಿಷ್ಟ ಪ್ರಮಾಣದಲ್ಲಿ ಪ್ರೋತ್ಸಾಹವನ್ನು ನೀಡಲಾಗುತ್ತದೆ. ಈ ಯೋಜನೆಯು 30 ಲಕ್ಷ ಯುವಕರಿಗೆ ಮತ್ತು ಅವರ ಉದ್ಯೋಗದಾತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು.

ಯೋಜನೆ ‘ಸಿ’: ಇದರಡಿ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಗಾವಕಾಶವನ್ನು ಕಲ್ಪಿಸುವುದು. ಈ ಎಲ್ಲಾ ಹೆಚ್ಚುವರಿ ಉದ್ಯೋಗಗಳು ಪ್ರತಿ ತಿಂಗಳಿಗೆ ₹1 ಲಕ್ಷ ಸಂಬಳದೊಳಗಿರಲಿದೆ. ಪ್ರತಿ ಹೆಚ್ಚುವರಿ ಉದ್ಯೋಗಿಗೆ EFPO ಕೊಡುಗೆಗಾಗಿ ಸರ್ಕಾರವು ಉದ್ಯೋಗದಾತರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ ₹3,000 ಮರುಪಾವತಿ ಮಾಡುತ್ತದೆ ಎಂದರು.

ಇನ್ನು ಮಹಿಳೆಯರನ್ನು ಉದ್ಯೋಗ ಕ್ಷೇತ್ರದಲ್ಲಿ ಪಾಲ್ಗೊಳ್ಳಲು ಉತ್ತೇಜಿಸುವಂತೆ ಮಾಡಲು ವಿಶೇಷ ವಸತಿ ಸೌಲಭ್ಯವನ್ನು ಒದಗಿಸಲಾಗಿವುದು ಎಂದರು.
.Budget: ಒಕ್ಕೂಟ ವ್ಯವಸ್ಥೆಗೆ ಒತ್ತು; ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ.ಕೇಂದ್ರ ಬಜೆಟ್ 2024 | ಕೇಂದ್ರ ಸರ್ಕಾರದಿಂದ ಮಹಿಳಾ ವಸತಿ ನಿಲಯಗಳ ಸ್ಥಾಪನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.