ನವದೆಹಲಿ: ಔದ್ಯೋಗಿಕ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಇಂದು 18ನೇ ಲೋಕಸಭೆಯ ಮೊದಲ ಬಜೆಟ್ ಮಂಡನೆ ಮಾಡಿದ ಅವರು, ‘ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ ₹3 ಲಕ್ಷ ಕೋಟಿಗೂ ಹೆಚ್ಚು ಅನುದಾನ ಮೀಸಲಿಡಲಿದೆ’ ಎಂದರು.

‘ಮಧ್ಯಂತರ ಬಜೆಟ್ನಲ್ಲಿ ಹೇಳಿರುವಂತೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಬಗ್ಗೆ ಗಮನಹರಿಸುವ ಅಗತ್ಯವಿದೆ’ ಎಂದು ಹೇಳಿದರು.

‘ಉದ್ಯೋಗಗಳಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗಾರಿಕಾ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇವೆ. ಕೌಶಲ್ಯ ಕಾರ್ಯಕ್ರಮಗಳ ಮೂಲಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳುವಂತೆ ಮಾಡಲಿದ್ದೇವೆ. ಶಿಶುವಿಹಾರಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗದಲ್ಲಿರುವ ಮಹಿಳೆಯರಿಗೆ ಸರ್ಕಾರ ನೆರವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.