ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ದಿಗಾಗಿ 2019-20ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ 'ನವ ನಗರೋತ್ಥಾನ ಯೋಜನೆ'ಯಡಿಯಲ್ಲಿ ಒಟ್ಟು ₹8344 ಕೋಟಿ ಮೊತ್ತದ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಿದೆ. 2020-21ನೇ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಸಮಗ್ರ ಅಭಿವೃದ್ಧಿ

* ಪರಿಣಾಮಕಾರಿ ಆಡಳಿತ ಹಾಗೂ ನಾಗರಿಕ ಸೇವೆಗಳನ್ನು ನೀಡಲು, ಬೆಂಗಳೂರು ನಗರಕ್ಕೆ ಸೀಮಿತವಾಗಿ, ಪ್ರತ್ಯೇಕ ಪೌರನಿಗಮ ಕಾಯ್ದೆ ರಚನೆ.

* ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣೆಗೆ “ಶುಭ್ರ ಬೆಂಗಳೂರು” ಯೋಜನೆಯಡಿ ₹999ಕೋಟಿಅನುದಾನದ ಕ್ರಿಯಾಯೋಜನೆ ಅನುಷ್ಠಾನ.

ಇದನ್ನೂ ಓದಿ:1 ಲಕ್ಷ ಮಹಿಳಾ ಕಾರ್ಮಿಕರಿಗೆ 'ವನಿತಾ ಸಂಗಾತಿ' ಯೋಜನೆಯಡಿ ಮಾಸಿಕ ಬಸ್ ಪಾಸ್

* ಬೆಂಗಳೂರಿನಲ್ಲಿರುವ ಆಯ್ದ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮಕ್ಕಳ ಪಾಲನಾ ಕೇಂದ್ರಗಳು, ಸ್ಯಾನಿಟರಿ ನ್ಯಾಪ್ಕಿನ್ ಡಿಸ್ಪೆನ್ಸರ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿರುವ ಮಹಿಳಾ ವಿಶ್ರಾಂತಿ ಕೋಣೆಗಳನ್ನು ಬೆಂಗಳೂರು ಸ್ಮಾರ್ಟ್ಸಿಟಿ ಯೋಜನೆಯಡಿ ತೆರೆಯಲಾಗುವುದು.

* ಬೆಂಗಳೂರು ನಗರದ ಕೆರೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶುಭ್ರ ಬೆಂಗಳೂರು ಯೋಜನೆಯಡಿ ನಗರದ ಕೆರೆಗಳ ಅಭಿವೃದ್ದಿಗಾಗಿ ₹100 ಕೋಟಿ ವೆಚ್ಚದ ಕ್ರಿಯಾಯೋಜನೆ.

* ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾಯೋಜನೆಯಲ್ಲಿ 317 ಕೋಟಿ ಕೆರೆಗಳ ಅಭಿವೃದ್ಧಿಗೆ ಮೀಸಲು.

* ಬೆಂಗಳೂರು ನಗರದ ಬೃಹತ್ ನೀರುಗಾಲುವೆಗಳ ಜಾಲದಲ್ಲಿರುವ ಕೊರತೆಗಳನ್ನು (Missing gap) ಅಭಿವೃದ್ಧಿ ಕಾಮಗಾರಿಗೆ ₹200 ಕೋಟಿಅನುದಾನ.

* ಬೆಂಗಳೂರು ನಗರಕ್ಕೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ದುಃಸ್ಥಿತಿಯಲ್ಲಿರುವ ರಸ್ತೆಗಳ ಪುನಶ್ಚೇತನಕ್ಕೆ ಮುಂದಿನ ಎರಡು ವರ್ಷಗಳಿಗೆ ₹1000 ಕೋಟಿ ಅನುದಾನ.

* ಕರ್ನಾಟಕ ವಿದ್ಯುತ್ ನಿಗಮದಿಂದ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ₹210 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಬೇರ್ಪಡಿಸಿದ ತ್ಯಾಜ್ಯ ಬಳಸಿಕೊಂಡು 11.5 ಮೆಗಾ ವ್ಯಾಟ್ ಸಾಮರ್ಥ್ಯದ ಹೊಸ “Waste to Energy” (ತ್ಯಾಜ್ಯದಿಂದ ವಿದ್ಯುತ್) ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆ. ವಾರ್ಷಿಕ 70 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಗುರಿ.

* ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಲ್ಕು ವಿದ್ಯುತ್ ಚಿತಾಗಾರಗಳ ಸ್ಥಾಪನೆ.

ಇದನ್ನೂ ಓದಿ:ಕರ್ನಾಟಕ ಬಜೆಟ್ 2020: ಮುಖ್ಯಾಂಶಗಳು

* ನಮ್ಮ ಮೆಟ್ರೊ ಯೋಜನೆಯಡಿ ಮೈಸೂರು ರಸ್ತೆಯಲ್ಲಿ ಕೆಂಗೇರಿಯವರೆಗೆ ಮತ್ತು ಕನಕಪುರ ರಸ್ತೆಯಲ್ಲಿ ಅಂಜನಾಪುರ ಟೌನ್ಷಿಪ್ವರೆಗೆ ಒಟ್ಟು 12.8 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಿ, 2020 ರಲ್ಲಿ ಸೇವೆ ಒದಗಿಸಲು ಕ್ರಮ.

* ಮೆಟ್ರೋ ಪ್ರಯಾಣಿಕರಲ್ಲದ ಪಾದಚಾರಿಗಳಿಗೆ 24 ಮೆಟ್ರೋ ನಿಲ್ದಾಣಗಳ ಮೂಲಕ ಮೇಲ್ಸೇತುವೆ ಸೌಲಭ್ಯ.

* ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ₹14,500 ಕೋಟಿ ಅಂದಾಜು ವೆಚ್ಚದಲ್ಲಿ 56 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆ – ಏರ್ಪೋರ್ಟ್ ಮೆಟ್ರೋ ನಿರ್ಮಾಣ ಪ್ರಾರಂಭ.

* ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 44 ಕಿ.ಮೀ. ಹೊಸ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ.

* ಸಬ್-ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ₹500 ಕೋಟಿ ರೂ. ಅನುದಾನ.

* ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ಜೋಡಿ ರೈಲು ಮಾರ್ಗ ಯೋಜನೆಯ ಶೇ. 50 ರಷ್ಟು ವೆಚ್ಚ ಭರಿಸಲು ರಾಜ್ಯದ ನಿರ್ಧಾರ.

* ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು ಮೂಲಸೌಲಭ್ಯ, ಟ್ರಾನ್ಸಿಟ್ ಆಧಾರಿತ ಬೆಳವಣಿಗೆ ಹಾಗೂ ಇತರ ಅಗತ್ಯ ನಿಯಂತ್ರಣಾ ಕ್ರಮಗಳಿಗೆ ಆದ್ಯತೆ.

* ಹೆಬ್ಬಾಳ, ಸಿಲ್ಕ್ ಬೋರ್ಡ್ ಹಾಗೂ ಕೆ.ಆರ್.ಪುರಂ ಜಂಕ್ಷನ್ಗಳಲ್ಲಿ ಸಂಚಾರ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ.

* ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಾಹನ ದಟ್ಟಣೆ ಇರುವ ರಸ್ತೆಗಳ ಅಭಿವೃದ್ಧಿಗೆ ₹500 ಕೋಟಿ ಅನುದಾನ.

* ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಸಮರ್ಪಕ ಮೆಟ್ರೋ ಫೀಡರ್ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 90 ಎಲೆಕ್ಟ್ರಿಕ್ ಬಸ್ಸುಗಳ ಖರೀದಿ.

ಇದನ್ನೂ ಓದಿ:ಬಿಎಸ್ವೈ ಬಜೆಟ್ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣದ ಉನ್ನತಿಗೆ ಸಿಕ್ಕಿದ್ದೇನು?

* ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗೆ “ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ” ಯೋಜನೆ

* ಸಂಚಾರ ದಟ್ಟಣೆಯ 12 ಕಾರಿಡಾರ್ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಅನುಷ್ಠಾನ.

* ರಸ್ತೆ ಸುರಕ್ಷತಾ ಚಟುವಟಿಕೆ ಕೈಗೊಳ್ಳುವ ರಸ್ತೆ ಸುರಕ್ಷತಾ ನಿಧಿಗೆ ₹200 ಕೋಟಿ ಅನುದಾನ.

* ಪ್ರಯಾಣಿಕ ಮತ್ತು ಸರಕು ಸಾಗಣೆ ವಾಹನಗಳಿಗೆ 20 ಕೋಟಿ ರೂ. ವೆಚ್ಚದಲ್ಲಿ Vehicle Location Tracking ವ್ಯವಸ್ಥೆ ಅಳವಡಿಕೆ.

* ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ನಗರದ ಹೊರವಲಯದಲ್ಲಿ‘Integrated Multi Modal Transport Hub’ ಅಭಿವೃದ್ಧಿ ಕುರಿತು ಕಾರ್ಯಾಧ್ಯಯನ

* ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ‘ಅಂಡರ್ಗ್ರೌಂಡ್ ವಾಹನ ಪಾರ್ಕಿಂಗ್’ ಯೋಜನೆ ಜಾರಿ.

* ಬೆಂಗಳೂರು ನಗರದಲ್ಲಿರುವ ಎಲ್ಲಾ ಗ್ರಾಹಕರಿಗೆ ಅತೀ ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸಲು ಆಪ್ಟಿಕಲ್ ಫೈಬರ್ ಅಳವಡಿಕೆ.

* ಸೆಪ್ಟೆಂಬರ್ 2021ರ ಅಂತ್ಯಕ್ಕೆ ಟಿ.ಜಿ.ಹಳ್ಳಿ ನೀರಿನ ಮೂಲದ ಪುನರುಜ್ಜೀವನ ಯೋಜನೆ ಪೂರ್ಣ

*ಬೆಂಗಳೂರು ಜಲಮಂಡಲಿಯ ತ್ಯಾಜ್ಯ ನೀರು ಸಂಸ್ಕರಣೆಯ ಸಾಮರ್ಥ್ಯವು 2020-21ನೇ ಸಾಲಿನ ಅಂತ್ಯಕ್ಕೆ 1587 ದಶಲಕ್ಷ ಲೀಟರ್ಗೆಹೆಚ್ಚಿಸಲು ಕ್ರಮ. ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ನವೀಕರಣಕ್ಕೆ ₹1000 ಕೋಟಿ ಅನುದಾನ.

*ಕಾವೇರಿ ನೀರು ಸರಬರಾಜು ಐದನೇ ಹಂತದ ಯೋಜನೆ ₹5550 ಕೋಟಿವೆಚ್ಚದಲ್ಲಿ 2023ರ ಅಂತ್ಯಕ್ಕೆ ಪೂರ್ಣ

*ಬೆಂಗಳೂರು ಅಭಿವೃದ್ಧಿ ವಲಯಕ್ಕೆ ಒಟ್ಟಾರೆಯಾಗಿ ಒದಗಿಸಿರುವ ಮೊತ್ತ ₹8,772 ಕೋಟಿ.

ಇದನ್ನೂ ಓದಿ:ಮಕ್ಕಳ ಆಯವ್ಯಯ ಘೋಷಿಸಿದ ಸರ್ಕಾರ: ಏನಿದೆ ಈ ಬಜೆಟ್ನಲ್ಲಿ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.