ಬೆಂಗಳೂರು: ಸರ್ಕಾರಿ ಶಾಲೆ, ಕಾಲೇಜುಗಳ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ನಲ್ಲಿ ಹಲವು ಕಾರ್ಯಕ್ರಮಗಳನ್ನು, ಅನುದಾನವನ್ನು ಘೋಷಿಸಿದ್ದಾರೆ.

ಏನೇನು ಯೋಜನೆ, ಎಷ್ಟು ಅನುದಾನ?

* ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ಅನುದಾನವನ್ನು ಘೋಷಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳ ವಿತರಣೆಗೆ ₹ 50 ಕೋಟಿ ಅನುದಾನ ಘೋಷಿಸಲಾಗಿದೆ.

* ಆಯ್ದ 50 ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಓದಿ:Karnataka Budget 2021 | ಯಡಿಯೂರಪ್ಪ ಬಜೆಟ್ನಲ್ಲಿ ಏನೇನಿವೆ ಕೊಡುಗೆ: ಮುಖ್ಯಾಂಶ

* 4687 ಪ್ರೌಢಶಾಲೆಗಳಿಗೆ ಲ್ಯಾಪ್ಟಾಪ್ ಮತ್ತು ಪ್ರೊಜೆಕ್ಟರ್ಗಳನ್ನು ಈಗಾಗಲೇ ನೀಡಲಾಗಿದ್ದು 2,351 ಸರ್ಕಾರಿ ಶಾಲೆಗಳಲ್ಲಿ ₹8 ಲಕ್ಷ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ಗಳನ್ನು ಸ್ಥಾಪಿಸಲಾಗಿದೆ. ಉಳಿದ ಸರ್ಕಾರಿ ಶಾಲೆಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.

* 8 ಮಂದಿ ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಬಗ್ಗೆಯೂ ಘೋಷಿಸಲಾಗಿದೆ.

* 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್, 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಅನುಕೂಲವಾಗುವಂತೆ ಕೊಠಡಿಗಳನ್ನು ಸ್ಮಾರ್ಟ್ ಕ್ಲಾಸ್ ರೂಮ್ಗಳಾಗಿ ಪರಿವರ್ತಿಸಲು ₹50 ಕೋಟಿ ಘೋಷಿಸಲಾಗಿದೆ.

* ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ₹50 ಕೋಟಿ ವೆಚ್ಚದಲ್ಲಿ ಮೆಟ್ರಿಕ್ ನಂತರದ ಹಂತದ 50 ವಸತಿ ನಿಲಯಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಓದಿ:Karnataka Budget 2021: ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು

* ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ ನೆರವಾಗಲು ಸರ್ಕಾರದ ಬ್ರೈಲ್ ಮುದ್ರಣಾಲಯದಲ್ಲಿ ‘ಸುಶ್ರಾವ್ಯ’ ಹೆಸರಿನ ಡಿಜಿಟಲ್ ಪುಸ್ತಕಗಳ ಬ್ಯಾಂಕ್ ಸ್ಥಾಪಿಸಿ ಶಾಲೆಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲಾಗುವುದು.

* ಪರಿಶಿಷ್ಟ ಪಂಗಡದವರ ಆಶ್ರಮ ಶಾಲೆಗಳಿಗೆ ‘ವಾಲ್ಮೀಕಿ ಆಶ್ರಮ ಶಾಲೆ’ ಎಂದು ಮರುನಾಮಕರಣ ಮಾಡಲಾಗುವುದು

* ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ನವೀಕರಣ ಮತ್ತು ದುರಸ್ತಿಗೆ ₹33 ಕೋಟಿ ಅನುದಾನ ಘೋಷಿಸಲಾಗಿದೆ.

ಓದಿ:ಕೋವಿಡ್ ಪರಿಣಾಮದಿಂದ ತೆರಿಗೆ ಪಾಲಿನಲ್ಲಿ ಇಳಿಕೆ: ಬಿಎಸ್ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.