ಬೆಂಗಳೂರು: ‘ಎಲ್ಲರಿಗೂ ಆರೋಗ್ಯ; ಎಲ್ಲೆಡೆಯೂ ಆರೋಗ್ಯ’ದ ಆಶಯವನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ವಲಯಕ್ಕೆ ಮಹತ್ವದ ಯೋಜನೆಗಳನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.

ಈ ಬಾರಿಯ ಬಜೆಟ್ನಲ್ಲಿ ₹13,982 ಕೋಟಿ ಮೊತ್ತವನ್ನು ಮೀಸಲಿಡಲು ಉದ್ದೇಶಿಸಲಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯ ಶೇ 5ರಷ್ಟಾಗಿದೆ. ಹಿಂದಿನ ವರ್ಷ ₹11,908 ಕೋಟಿ ಒದಗಿಸಲಾಗಿದ್ದು, ಇದು ಒಟ್ಟು ಮೊತ್ತದಲ್ಲಿನ ಶೇ4ರಷ್ಟಿತ್ತು.

ಬೆಂಗಳೂರಿನ ಎಲ್ಲ ವಾರ್ಡ್ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾ
ಸಣೆಗೆ ಒಟ್ಟು 438 ‘ನಮ್ಮ ಕ್ಲಿನಿಕ್’ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ ನಾಗರಿಕರಿಗೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡುವ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಕ್ಲಿನಿಕ್ಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ಪತ್ತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ತಜ್ಞರ ಬಳಿ ಕಳುಹಿಸುವ ಸೇವೆ ಒದಗಿಸಲಾಗುವುದು.

ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲುರಾಜ್ಯದಲ್ಲಿ 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬಡ ಹಿರಿಯ ನಾಗರಿಕರಿಗೆ ಯೋಜನೆ ಅಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ ನೀಡಲು ಉದ್ದೇಶಿಸಲಾಗಿದೆ.

ಹುಬ್ಬಳಿಯಲ್ಲಿ ₹250 ಕೋಟಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಹಾಗೂ ಬೆಳಗಾವಿಯಲ್ಲಿ ₹50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ ‘ಇನ್ಫುಷನ್ ಸೆಂಟರ್’ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಏಳು ತಾಲ್ಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ತುಮಕೂರಿನಲ್ಲಿ ₹20 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪಿಸಲು ಪ್ರಸ್ತಾಪಿಸಲಾಗಿದ್ದು, 2022-23ರಲ್ಲಿ ₹10 ಕೋಟಿ ಅನುದಾನ ಒದಗಿಸಲು ಮೀಸಲಿಡಲಾಗಿದೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯ ಇರುವ ಸರ್ಕಾರಿ ಆಸ್ಪತ್ರೆಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭಿಸಲು ಪ್ರಸ್ತಾಪಿಸಲಾಗಿದೆ.

‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಮುಖ್ಯಮಂತ್ರಿ ಸ್ವಕ್ಷೇತ್ರ ಶಿಗ್ಗಾಂವ ವ್ಯಾಪ್ತಿಯಲ್ಲಿರುವ ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.

ಬೆಂಗಳೂರು ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.

ಬಡವರಿಗೆ ವೈದ್ಯಕೀಯ ಶಿಕ್ಷಣ ಕಲ್ಪಿಸುವ ವಿಶೇಷ ಕ್ರಮ

* ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ನೀಟ್’ ಪರೀಕ್ಷೆಗೆ ತರಬೇತಿ

* ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕ್ಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.

* ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ

ಅಪೌಷ್ಟಿಕತೆ ನಿವಾರಣೆಗೆ ಒತ್ತು
* ಪೌಷ್ಟಿಕ ಕರ್ನಾಟಕ ಯೋಜನೆಯಡಿ ₹93 ಕೋಟಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ

*ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆ
ಬಿಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ, ಅಪೌಷ್ಟಿಕತೆ ನಿವಾರಿಸುವ ‘ಸ್ಫೂರ್ತಿ’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

ಆಶಾ: ಗೌರವ ಧನ ಹೆಚ್ಚಳ

* ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ₹1000ಗಳಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

* ಉಚಿತ ಡಯಾಲಿಸಿಸ್ ಸೇವೆ ಬಲಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ತಿಂಗಳಿಗೆ ಪ್ರಸ್ತುತ ನೀಡುತ್ತಿರುವ 30,000 ಡಯಾಲಿಸಿಸ್ ಸೈಕಲ್ಗಳನ್ನು 60,000 ಸೈಕಲ್ಗಳಿಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇದಕ್ಕಾಗಿ ₹20 ಕೋಟಿ ಹೆಚ್ಚುವರಿ ಅನುದಾನ

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ; ಸೇವೆ ಆಧಾರದಲ್ಲಿ ಗೌರವಧನ ಹೆಚ್ಚಳ
ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ
ಬೊಮ್ಮಾಯಿ ಬಜೆಟ್ 2022: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ
ರಾಜ್ಯದ ಪ್ರಮುಖ ನಗರಗಳಲ್ಲಿ 'ನಮ್ಮ ಕ್ಲಿನಿಕ್' ಸ್ಥಾಪನೆ: ಸಿಎಂ ಬೊಮ್ಮಾಯಿ
ಬೊಮ್ಮಾಯಿ ಬಜೆಟ್: ರೇಷ್ಮೆ, ಪಶುಸಂಗೋಪನೆ ಕ್ಷೇತ್ರಗಳಿಗೇನು ಕೊಡುಗೆ?
ರಾಜ್ಯ ಬಜೆಟ್: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಹೊಸ 7 ವಿ.ವಿ ಸ್ಥಾಪನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.