ಬೆಂಗಳೂರು: ರಾಜ್ಯದಲ್ಲಿನ ಉನ್ನತ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಸರ್ಕಾರ ತಿಳಿಸಿದೆ.

2022–23ನೇ ಸಾಲಿನಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಸೇರಿದಂತೆ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯನ್ನು ಘೋಷಣೆ ಮಾಡಲಾಗಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವಧನವನ್ನು ₹11,000 ದಿಂದ 32,000ಕ್ಕೆ ಹೆಚ್ಚಿಸಲಾಗಿದೆ.

ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗುವುದು.

Karnataka Budget Live Updates: ಸಿಎಂ ಆರೋಗ್ಯ ವಾಹಿನಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ₹250 ಕೋಟಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆ

ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ವಿಶ್ವವಿದ್ಯಾಲಯಗಳಿಗೆ ವಾರ್ಷಿಕ ತಲಾ 2 ಕೋಟಿ ರೂ.ಗಳ ಆವರ್ತಕ ವೆಚ್ಚ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ–ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.