ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Budget 2022: ಮಹಿಳೆಯರು, ಮಕ್ಕಳಿಗೆ ಬೊಮ್ಮಾಯಿ ಕೊಟ್ಟಿದ್ದು ಏನು?

ಫಾಲೋ ಮಾಡಿ
Comments

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ ಮಂಡಿಸಿದ 2022-23ನೇ ಸಾಲಿನ ಬಜೆಟ್(karnataka budget 2022-23) ನಲ್ಲಿ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟು ₹ 4,713 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಹಾಗೇಮಹಿಳಾ ಉದ್ದೇಶಿತ ಯೋಜನೆಗಳಿಗೆ ₹ 43,188 ಕೋಟಿ ಘೋಷಣೆ ಮಾಡಲಾಗಿದೆ.

ಈ ಬಾರಿಯ ಬಜೆಟ್‌ನಲ್ಲಿ ಮಕ್ಕಳ ಉದ್ದೇಶಿತ ವಿವಿಧ ಯೋಜನೆಗಳಿಗೆ ₹ 40,944 ಕೋಟಿ ಅನುದಾನ ಮೀಸಲಿರಿಸಿದೆ. ಸ್ವಸ್ಥ ಹಾಗೂ ಸುಶಿಕ್ಷಿತ ಸಮಾಜ ನಿರ್ಮಾಣ ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಮುಖ್ಯಾಂಶಗಳು...

*ಮಾಸಿಕ ಪಿಂಚಣಿ ಹೆಚ್ಚಳ: ವಿಚ್ಛೇದಿತ, ಅವಿವಾಹಿತ ಮಹಿಳೆ, ವಿಧವಾ ವೇತನ, ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮಾಸಿಕ ಪಿಂಚಣಿಯನ್ನು ₹ 800 ರೂ.ಗೆ ಹೆಚ್ಚಳ ಮಾಡಲಾಗಿದೆ. ಆ್ಯಸಿಡ್ ದಾಳಿಗೊಳಗಾದ ಮಹಿಳೆಯರ ಪಿಂಚಣಿಯನ್ನು ₹3 ಸಾವಿರದಿಂದ ₹ 10 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ.

* ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದೆ.

*ಉದ್ಯೋಗಸ್ಥ ಮಹಿಳೆಯರಿಗೆ ವಸತಿ:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿಯಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳನ್ನು ಸ್ಥಾಪಿಸಲಾಗುವುದು. ಇದರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತುಅಲ್ಪಸಂಖ್ಯಾತ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

* ಹೆಣ್ಣುಮಕ್ಕಳ ಅನುಪಾಲನೆ ಕೇಂದ್ರ: 18 ವರ್ಷ ಪೂರ್ಣಗೊಂಡ ಸಂಕಷ್ಟದಲ್ಲಿರುವ ಹೆಣ್ಣುಮಕ್ಕಳ ವಿದ್ಯಾಭ್ಯಾಸ ಹಾಗೂ ವೃತ್ತಿಪರ ಕೌಶಲ್ಯ ತರಬೇತಿಗೆ ಸ್ವಯಂಸೇವಾ ಸಂಸ್ಥೆ ನೆರವಿನೊಂದಿಗೆ ಪ್ರಾಯೋಗಿಕವಾಗಿ 6 ಅನುಪಾಲನೆ ಗೃಹಗಳ ಸ್ಥಾಪನೆ.

*ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿ ಉತ್ತಮ ಕೆಲಸ ಮಾಡುತ್ತಿರುವ ಧಾರವಾಡದ ಕರ್ನಾಟಕ ಕ್ಯಾನ್ಸರ್ ಇನ್ಸಿಟಿಟ್ಯೂಟ್, ಬೆಂಗಳೂರಿನ ಬಸವನಗುಡಿಯ ಅಮೃತ ಶಿಶು ನಿವಾಸ ತಾಯಿ ಮತ್ತು ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಸವ ಕಲ್ಯಾಣದಲ್ಲಿರುವ ಶ್ರೀ ನೀರಜಿ ಭುವ ವಿಸ್ವಸ್ಥ ನಿಧಿ ಹಾಗೂ ಮೈಸೂರಿನ ಶಕ್ತಿಧಾಮಸಂಸ್ಥೆಗಳಿಗೆ ವಿಶೇಷ ನೆರವು ನೀಡಲಾಗುವುದು.

* ಸ್ಫೂರ್ತಿ ಯೋಜನೆ ವಿಸ್ತರಣೆ: ಬಾಲ್ಯ ವಿವಾಹ ತಡೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರೋ ಸ್ಫೂರ್ತಿ ಯೋಜನೆಯನ್ನು ಬೇರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು.

* ಮಹಿಳಾ ಉದ್ಯಮಿಗಳಿಗೆ ₹10 ಲಕ್ಷ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದವತಿಯಿಂದ 'ಎಲಿವೇಟ್' ಯೋಜನೆಯಡಿ ಗುರುತಿಸಲ್ಪಟ್ಟ ಮಹಿಳಾ ಉದ್ಯಮಿಗಳು ಮತ್ತು ಮಹಿಳೆ ನೇತೃತ್ವದ ಸ್ಟಾರ್ಟ್ ಅಪ್‌ಗಳಿಗೆ ₹10 ಲಕ್ಷ ಸಾಲ ಸೌಲಭ್ಯ ನೀಡಲಾಗುವುದು.

ಶಿಶುಪಾಲನಾ ಕೇಂದ್ರ: ಪ್ರತಿ ಜಿಲ್ಲೆಯಲ್ಲಿ ಎರಡು ತಾಲೂಕು ಕೇಂದ್ರಗಳಲ್ಲಿ ಹೆಚ್ಚು ಮಹಿಳಾ ಕಾರ್ಮಿಕರ ಸಾಂದ್ರತೆ ಇರುವ ಪ್ರದೇಶಗಳಲ್ಲಿ ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.

*ದುಡಿಯುವ ಮಹಿಳೆಯರ ಮಕ್ಕಳ ಪಾಲನೆಗೆ ರಾಜ್ಯದ 5 ತಾಲೂಕುಗಳಲ್ಲಿ ಮಹಾತ್ಮ ಗಾಂಧಿ ಎನ್.ಆರ್.ಇ.ಜಿ.ಎ ಯೋಜನೆ ಸಹಭಾಗಿತ್ವದಲ್ಲಿ ಶಿಶುಪಾಲನಾ ಕೇಂದ್ರಗಳ ಪ್ರಾಯೋಗಿಕ ಅನುಷ್ಠಾನ ಮಾಡಲಾಗುವುದು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

* 20 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹1,500, 10 ರಿಂದ 20 ವರ್ಷ ಸೇವೆ ಸಲ್ಲಿಸಿದವರಿಗೆ ₹ 1,250, 10ಕ್ಕಿಂತ ಕಡಿಮೆ ವರ್ಷ ಸೇವೆ ಸಲ್ಲಿಸಿದವರಿಗೆ ₹ 1,000ಗೆ ಹೆಚ್ಚಳ.

* ಎನ್.ಪಿ.ಎಸ್. ಲೈಟ್ ಯೋಜನೆಯಿಂದ ವಂಚಿತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ₹ 50 ಸಾವಿರ, ಸಹಾಯಕಿಯರಿಗೆ ₹30 ಸಾವಿರ ಇಡಿಗಂಟು ಪಾವತಿಸಲು ನಿರ್ಧಾರ.

ಅಪೌಷ್ಟಿಕತೆ ನಿವಾರಣೆಗೆ ಕ್ರಮ

*6 ತಿಂಗಳಿಂದ 3 ವರ್ಷದ ತೀವ್ರ ಅಪೌಷ್ಟಿಕ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ,

* ಅಪೌಷ್ಟಿಕ ಮಕ್ಕಳಿಗೆ ಚುಚ್ಚುಮದ್ದು, ಆರೋಗ್ಯ ತಪಾಸಣೆ

* ಅಪೌಷ್ಟಿಕ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಅಡಿ ಕೆನೆಭರಿತ ಹಾಲಿನ ಪುಡಿಯನ್ನು 52 ಲಕ್ಷ ಫಲಾನುಭವಿಗಳಿಗೆ ನೀಡಲು ಯೋಜನೆ.

*3ರಿಂದ 6 ವರ್ಷ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು 300 ದಿನಗಳ ಬಿಸಿಯೂಟದ ಜೊತೆಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ಹಾಗೂ ಹಾಲು ಒದಗಿಸಲಾಗುತ್ತಿದೆ.

*ಪೌಷ್ಟಿಕ ಕರ್ನಾಟಕ'ವೆಂಬ ಹೊಸ ಯೋಜನೆಯಲ್ಲಿ ₹ 93 ಕೋಟಿ ವೆಚ್ಚದಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಕಬ್ಬಿಣ, ಪೋಲಿಕ್ ಆಮ್ಲ ವಿಟಮಿನ್ ಬಿ-12 ಸೇರ್ಪಡೆಗೊಳಿಸಿದ ಸಾರವರ್ಧಿತ ಅಕ್ಕಿಯನ್ನು ಪ್ರಾಯೋಗಿಕವಾಗಿ ವಿತರಣೆ ಮಾಡುವುದು.

* ರಾಜ್ಯದಲ್ಲಿ ಪೌಷ್ಟಿಕತಾ ಸಮೀಕ್ಷೆ ಕೈಗೊಳ್ಳಲಾಗುವುದು.

ಇವನ್ನೂ ಓದಿ:
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT