ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಕೃಷಿಕರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಂಪರ್ ಕೊಡುಗೆಗಳನ್ನು ನೀಡಿದ್ಧಾರೆ. ಇದೇ ವರ್ಷದಿಂದ ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು ₹3 ಲಕ್ಷಗಳಿಂದ ₹ 5 ಲಕ್ಷಗಳಿಗೆ ಹೆಚ್ಚಿಸಲಾಗಿದೆ.

ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ₹ 25,000 ಕೋಟಿಗಳಷ್ಟು ಸಾಲ ವಿತರಿಸಲಾಗುವುದು ಎಂದು ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

ಕೃಷಿ ವಲಯದ ಪ್ರಮುಖಾಂಶಗಳು...

* ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ ₹ 10 ಸಾವಿರಗಳ ಹೆಚ್ಚುವರಿ ಸಹಾಯ ಧನ ನೀಡಲಾಗುವುದು.

* ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ ₹ 962 ಕೋಟಿ ವೆಚ್ಚ ಮಾಡಲಾಗಿದೆ.

* ನೀರಾವರಿ ಪಂಪ್‌ಸೆಟ್‌ಗಳಿಗೆ ₹ 52,590 ಕೋಟಿ ವಿದ್ಯುತ್ ಸಹಾಯ ಧನ ನೀಡಲಾಗಿದೆ.

*ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ ₹ 4,900 ಕೋಟಿ ಪ್ರೀಮಿಯಂ ಪಾವತಿಸಲಾಗಿದೆ.

LIVE BLOG: ರಾಜ್ಯ ಬಜೆಟ್–2023: ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

* ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ ₹ 6,650 ಕೋಟಿ ಒದಗಿಸಲಾಗಿದೆ.

* ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ₹180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗುವುದು.

* ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ₹ 400 ಕೋಟಿ ಅನುದಾನ

* ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು ₹ 2,037 ಕೋಟಿ

Karnataka Budget 2023 Highlights: ರೈತರಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ

* ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ ₹ 175 ಕೋಟಿ ನೆರವು ನೀಡಲಾಗಿದೆ.

* ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ₹ 5,245 ಕೋಟಿ ವೆಚ್ಚ ಮಾಡಲಾಗಿದೆ.

* ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ ₹ 125 ಕೋಟಿ ನೀಡಲಾಗಿದೆ.

* ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ ₹ 2,900 ಕೋಟಿಗೆ ಮಾರುಕಟ್ಟೆ ನೆರವು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.