ಬೆಂಗಳೂರು: ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎರಡು ಕಾರಿಡಾರ್‌ಗಳನ್ನು ರೂಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಹಾಗೂ ಬೀದರ್– ಬೆಂಗಳೂರು ನಡುವೆ ಆರ್ಥಿಕ ಕಾರಿಡಾರ್‌ಗಳನ್ನು ಅಭಿವೃದ್ಧಿಪಡಿಸುವುದಾಗಿ ಪ್ರಸ್ತಾಪಿಸಲಾಗಿದೆ.

ಮಂಗಳೂರು– ಬೆಂಗಳೂರು ಕಾರಿಡಾರ್‌ನಿಂದ ಬಂದರು ಸಂಪರ್ಕ ಸುಲಭವಾಗುವ ಜತೆಗೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಕಡಿಮೆಯಾಗಲಿದೆ. ಬೀದರ್– ಬೆಂಗಳೂರು ಕಾರಿಡಾರ್‌ನಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿ ಚುರುಕೊಳ್ಳಲಿದೆ ಎಂದು ಪ್ರತಿಪಾದಿಸಲಾಗಿದೆ.

ಕೆಶಿಪ್- 4 ಯೋಜನೆ ಅಡಿ ₹ 5,736 ಕೋಟಿ ಮೊತ್ತದಲ್ಲಿ ಬಾಹ್ಯ ಹಣಕಾಸು ಸಂಸ್ಥೆ ನೆರವಿನೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳ 875 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5 ಪ್ರಾರಂಭಿಸಲು ಉದ್ದೇಶಿಸಲಾಗಿದೆ.
₹ 4,000 ಕೋಟಿ ವೆಚ್ಚದಲ್ಲಿ ರಾಜ್ಯದ 1,300 ಕಿ.ಮೀ ಉದ್ದದ ಪ್ರಮುಖ ರಸ್ತೆ ಅಭಿವೃದ್ಧಿ.

ಬೆಳಗಾವಿಯಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ₹ 450 ಕೋಟಿ ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ

ಬೆಂಗಳೂರು- ಮಂಡ್ಯ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಮೇಲ್ಸೇತುವೆ ನಿರ್ಮಾಣ

ಮೈಸೂರು ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ- ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮತ್ತು ಚಿಕ್ಕಬಳ್ಳಾಪುರದಲ್ಲಿ ₹ 350 ಕೋಟಿ ಮೊತ್ತದಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣ

ಮೂಲಸೌಕರ್ಯ

ದ್ವೀಪಾಭಿವೃದ್ಧಿಗೆ ’ಮಾಸ್ಟರ್ ಪ್ಲಾನ್‘

ನೇತ್ರಾವತಿ ನದಿಯಲ್ಲಿ ಜಲಮೆಟ್ರೊ

ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ. ₹ 20,000 ಕೋಟಿ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರು ಅಭಿವೃದ್ಧಿಪಡಿಸಲು ಐಐಟಿ ಮದ್ರಾಸ್ ಸಹಯೋಗದಲ್ಲಿ ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ

ದ್ವೀಪಗಳ ಸಮಗ್ರ ಅಭಿವೃದ್ಧಿಗೆ ’ಮಾಸ್ಟರ್ ಪ್ಲಾನ್‘ ತಯಾರಿ

ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೊ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿ

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ ₹ 1,600 ಕೋಟಿ ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣ ಅಭಿವೃದ್ದಿ

ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಭೂಸ್ವಾಧೀನಕ್ಕೆ ಬಾಕಿ ಇರುವ ₹ 43 ಕೋಟಿ ಬಿಡುಗಡೆ

ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ ₹ 55 ಕೋಟಿ ಬಿಡುಗಡೆ, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ ₹ 30 ಕೋಟಿ ಬಿಡುಗಡೆ

₹ 220 ಕೋಟಿ ವೆಚ್ಚದಲ್ಲಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ

ರಾಜ್ಯದ ಮೂಲಸೌಕರ್ಯ ಯೋಜನೆಗಳನ್ನು ಖಾಸಗಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ಪಿ.ಪಿ.ಪಿ. ನೀತಿ-2018ಕ್ಕೆ ಮಧ್ಯಂತರ ಪರಿಷ್ಕರಣೆ

ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ಎಲ್ಲ ಪಿ.ಪಿ.ಪಿ. ಮಾದರಿಯ ಯೋಜನೆಗಳ ಮಾಹಿತಿ ಸಂಗ್ರಹಣೆ, ಮೇಲ್ವಿಚಾರಣೆ ಮತ್ತು ಪರಿಶೀಲನೆಗಾಗಿ ತಂತ್ರಜ್ಞಾನ ಆಧಾರಿತ ಮಾಹಿತಿ ನಿರ್ವಹಣಾ ವ್ಯವಸ್ಥೆ ಅಳವಡಿಕೆ

ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹದ ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕರಣದ ಅವಕಾಶಗಳನ್ನು ಗುರುತಿಸಲು ಹಾಗೂ ಈ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ವಿಧಾನವನ್ನು ರೂಪಿಸಲು ತಜ್ಞರ ಸಮಿತಿ ರಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.