ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಲಿದ್ದಾರೆ.ಅಸ್ಥಿರ ಜಾಗತಿಕ ಆರ್ಥಿಕ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ ಅನ್ನು ಭಾರತವಷ್ಟೇ ಅಲ್ಲ, ಇಡೀ ವಿಶ್ವವೇ ಎದುರು ನೋಡುತ್ತಿದೆ. ಭಾರತ ಮೊದಲು, ನಾಗರಿಕರು ಮೊದಲು' ಎಂಬ ಚಿಂತನೆಯೊಂದಿಗೆ ಬಜೆಟ್ ಅಧಿವೇಶನವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಹೊಸ ಆರ್ಥಿಕ ವರ್ಷದಲ್ಲಿ ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆ ಪ್ರಮಾಣವು ಶೇಕಡ 6 ರಿಂದ ಶೇ 6.8ರಷ್ಟು ಇರಲಿದೆ ಎಂದು ಆರ್ಥಿಕ ಸಮೀಕ್ಷೆ ವರದಿಯು ಅಂದಾಜಿಸಿದೆ. ಹಿಂದಿನ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಶೇಕಡ 8.7ರಷ್ಟು ಬೆಳವಣಿಗೆ ಕಂಡಿತ್ತು. ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ 7ರಷ್ಟು ಇರುವ ನಿರೀಕ್ಷೆ ಇದೆ.