ಬೆಂಗಳೂರು: ‘ಬಂಡವಾಳ ವೃದ್ಧಿ ತೆರಿಗೆಯನ್ನು ಹೆಚ್ಚಿಸಬಹುದು ಎಂಬ ಆತಂಕವು ಕೇಂದ್ರ ಬಜೆಟ್ ಮಂಡನೆಗೂ ಮೊದಲು ಹೂಡಿಕೆದಾರರಲ್ಲಿ ಇತ್ತು. ಆದರೆ ಈ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವುದು ಹೂಡಿಕೆದಾರರ ಮೇಲೆ ಧನಾತ್ಮಕ ಪರಿಣಾಮ ಬೀರಿದೆ’ ಎಂದು ರಾಷ್ಟ್ರೀಯ ಷೇರುಪೇಟೆಯ (ಎನ್ಎಸ್ಇ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಶಿಷ್ ಕುಮಾರ್ ಚೌಹಾಣ್ ಹೇಳಿದ್ದಾರೆ.

‘ಇದು ಬೆಳವಣಿಗೆಗೆ ಪೂರಕವಾಗಿರುವ ಬಜೆಟ್. ಮೂಲಸೌಕರ್ಯ ಹಾಗೂ ಉದ್ಯೋಗ ಸೃಷ್ಟಿಗೆ ಇದರಲ್ಲಿ ಆದ್ಯತೆ ನೀಡಲಾಗಿದೆ. ಸರ್ಕಾರದ ವಿತ್ತೀಯ ಕೊರತೆಯನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಶೇಕಡ 5.9ಕ್ಕೆ ತಗ್ಗಿಸುವುದಾಗಿ ಹೇಳಲಾಗಿದೆ. ಅಂದರೆ, ಮುಂದಿನ ಮೂರು ವರ್ಷಗಳಲ್ಲಿ ವಿತ್ತೀಯ ಕೊರತೆಯನ್ನು ಶೇ 4.5ಕ್ಕೆ ಇಳಿಸಲು ಇದು ಒಂದು ಮಾರ್ಗ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.