ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಹಾಗೂ ಮಾಜಿ ದೇವದಾಸಿಯರ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ.

2024–25ರ ಬಜೆಟ್ ಅನ್ನು ಸಿದ್ದರಾಮಯ್ಯ ಇಂದು( ಫೆ.16) ಮಂಡಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರು:

ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ‘ಮೈತ್ರಿ ಯೋಜನೆ‘ಯಡಿ ನೀಡುವ ಮಾಸಾಶನವನ್ನು ₹800 ರಿಂದ ₹1,200ಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ:

ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು ₹1500 ರಿಂದ ₹2000ಗೆ ಹೆಚ್ಚಳ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ ₹86,423 ಕೋಟಿ ಹಾಗೂ ಮಕ್ಕಳ ಉದ್ದೇಶಿತ ಯೋಜನೆಗಳಿಗೆ ₹ 54,617 ಕೋಟಿ ಒದಗಿಸಲಾಗಿಸಲಾಗಿದ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.