ನವದೆಹಲಿ: ಕೇಂದ್ರ ಸರ್ಕಾರದ ನೂತನ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಬಜೆಟ್ ಮಂಡನೆಯ ದಿನದಂದು ಸಂಸತ್ತಿನಲ್ಲೂ ಪ್ರತಿಭಟಿಸಿದ್ದಾರೆ.

ಕಾಂಗ್ರೆಸ್ ಸಂಸದರಾದ ಜಸ್ಬೀರ್ ಸಿಂಗ್ ಗಿಲ್ ಮತ್ತು ಗುರ್ಜಿತ್ ಸಿಂಗ್ ಆಜ್ಲಾ ಅರು ಸಂಸತ್ತಿಗೆ ಕಪ್ಪು ಬಣ್ಣದ ಗೌನು ಧರಿಸಿ ಆಗಮಿಸಿದರು.

ಕೇಂದ್ರ ಬಜೆಟ್ 2021 ಲೈವ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ಕೇಂದ್ರ ಸರ್ಕಾರ ಹಾಗೂ ಕೃಷಿ ಕಾಯ್ದೆಗಳ ವಿರುದ್ಧ ಭಿತ್ತಿಪತ್ರಗಳನ್ನು ತಮ್ಮ ಕೊರಳಿಗೆ ಹಾಕಿಸಿಕೊಂಡಿರುವ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2021 ಮಂಡಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ.

ಕಾಗದರಹಿತ ಡಿಜಿಟಲ್ ಬಜೆಟ್; ಟ್ಯಾಬ್ ಪ್ರದರ್ಶಿಸಿದ ನಿರ್ಮಲಾ ಸೀತಾರಾಮನ್

ಅತ್ತ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಜೆಟ್ ಹಿನ್ನಲೆಯಲ್ಲಿಪ್ರತಿಭಟನಾ ನಿರತ ಸ್ಥಳಗಳಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗಿದೆ.

ನವೆಂಬರ್ 26ರಿಂದಲೇ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಹಿಂಸಾಚಾರ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.