Photos: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಅವರ ತಂಡ ಕಾಣಿಸಿಕೊಂಡಿದ್ದು ಹೀಗೆ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ನಿರ್ಮಲಾ ಸೀತಾರಾಮನ್ ಅವರೊಂದಿಗೆ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ಕೇಂದ್ರದ ಬಜೆಟ್ ಮಂಡಿಸುವುದಕ್ಕೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.
ADVERTISEMENT
ಕೇಂದ್ರದ ಬಜೆಟ್ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿಗೆ ಹೊರಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಭವನದ ನಾರ್ತ್ ಬ್ಲಾಕ್‌ನ ಹೊರಗೆ ಬಜೆಟ್ 2022-23 ಅನ್ನು ಒಳಗೊಂಡ ಪ್ರತಿಯನ್ನು ಪ್ರದರ್ಶಿಸಿದರು
ಬಜೆಟ್ ಪ್ರತಿಯನ್ನು ಪ್ರದರ್ಶಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಈ ಸಂದರ್ಭದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.