ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಗೆ ನನ್ನ ಪ್ರತಿಕ್ರಿಯೆ;
ಕೇಂದ್ರ ವಿತ್ತ ಸಚಿವೆ @nsitharaman ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು… pic.twitter.com/iNPOttnHWj
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಕೇಂದ್ರ @BJP4India ಸರ್ಕಾರದ ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರಾದ @nsitharaman ಅವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್ನಲ್ಲಿ ಘೋಷಿಸಿದ್ದರು. ಆದರೆ ಈ ಯೋಜನೆಗೆ…
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ…
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಗ್ಯ, ರಕ್ಷಣೆ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ.…