ನವದೆಹಲಿ: 2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ಎಲ್ಲಾ ವರ್ಗದ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯಿಂದ ಬಜೆಟ್ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ, ‘2023–24ನೇ ಆರ್ಥಿಕ ವರ್ಷದಲ್ಲಿ ಗಳಿಸಿದ ಆದಾಯಕ್ಕೆ ಸಂಬಂಧಿಸಿ ಇಲ್ಲಿಯವರೆಗೆ 6 ಕೋಟಿಗೂ ಹೆಚ್ಚು ತೆರಿಗೆದಾರರು ರಿಟರ್ನ್ಸ್ ಸಲ್ಲಿಸಿದ್ದಾರೆ’ ಎಂದು ತಿಳಿಸಿದರು.

ಹೊಸ ತೆರಿಗೆ ಪದ್ಧತಿಯನ್ನು ತೆರಿಗೆದಾರರು ಆಯ್ಕೆ ಮಾಡಿಕೊಳ್ಳುತ್ತಾರೆಯೇ ಎಂಬ ಆತಂಕ ಇತ್ತು. ತೆರಿಗೆದಾರರ ಮೇಲಿನ ಅಧಿಕ ಹೊರೆ ತಪ್ಪಿಸಲು ಈ ಪದ್ಧತಿಯನ್ನು ಸರಳೀಕರಿಸಲಾಗಿದೆ. ಶೇ 70ಕ್ಕೂ ಹೆಚ್ಚು ತೆರಿಗೆದಾರರು ಈ ಪದ್ಧತಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

2022–23ನೇ ಆರ್ಥಿಕ ವರ್ಷದಲ್ಲಿ 8.16 ಕೋಟಿ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.