ನವದೆಹಲಿ: ತೈಲ ಮಾರಾಟ ಕಂಪನಿಗಳು (ಒಎಂಸಿ) 19 ಕೆ.ಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು ₹158ರಷ್ಟು ಇಳಿಕೆ ಮಾಡಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬಂದಿದ್ದು, ದೆಹಲಿಯಲ್ಲಿ 19 ಕೆ.ಜಿ ತೂಕದ ಸಿಲಿಂಡರ್ ದರ ₹1,522 ರಷ್ಟಿದ್ದರೆ, ಬೆಂಗಳೂರಿನಲ್ಲಿ ₹1,609 ರಷ್ಟಿದೆ.

ಆಗಸ್ಟ್ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ₹100ರಷ್ಟು ಕಡಿಮೆ ಮಾಡಲಾಗಿತ್ತು. ಇದಕ್ಕೂ ಮೊದಲು ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಮೂರು ಬಾರಿ ತಗ್ಗಿಸಲಾಗಿದೆ.

ಇತ್ತೀಚೆಗಷ್ಟೇ ಮನೆಗಳಲ್ಲಿ ಅಡುಗೆಗೆ ಬಳಸುವ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರವು ₹200ರಷ್ಟು ತಗ್ಗಿಸಿತ್ತು. ಬುಧವಾರದಿಂದಲೇ ಪರಿಷ್ಕೃತ ಬೆಲೆ ಅನ್ವಯವಾಗುತ್ತಿದೆ.

ಇದನ್ನೂ ಓದಿ... LPG price cut: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹200 ಇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.