ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮತ್ತೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಗಿಟ್ಟಿಸಿದ್ದಾರೆ.

ಮಂಗಳವಾರ ಬಿಡುಗಡೆಯಾಗಿರುವ ಫೋರ್ಬ್ಸ್ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಮುಕೇಶ್ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಹಿಂಡೆನ್‌ಬರ್ಗ್ ವರದಿ ಬಳಿಕ ಕಂಪನಿಗಳ ಷೇರುಗಳ ಬೆಲೆ ಕುಸಿತದಿಂದ ತತ್ತರಿಸಿರುವ ಅದಾನಿ 24ನೇ ಸ್ಥಾನಕ್ಕೆ ದೂಡಲ್ಪಟ್ಟಿದ್ದಾರೆ.

‘ಜನವರಿ 24ರಂದು ಅದಾನಿ ಅವರ ಸಂಪತ್ತಿನ ನಿವ್ವಳ ಮೌಲ್ಯ ಸುಮಾರು 126 ಬಿಲಿಯನ್ ಡಾಲರ್ ಇತ್ತು. ಆಗ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದರು. ಹಿಂಡೆನ್‌ಬರ್ಗ್ ರಿಸರ್ಚ್ ವರದಿ ಬಳಿಕ ಅವರ ಕಂಪನಿಗಳ ಷೇರುಗಳ ಮೌಲ್ಯ ಕುಸಿದಿದೆ’ಎಂದು ಫೋರ್ಬ್ಸ್ ಹೇಳಿದೆ.

ಅದಾನಿ ಸಂಪತ್ತಿನ ನಿವ್ವಳ ಮೌಲ್ಯವು ಈಗ 47.2 ಬಿಲಿಯನ್ ಡಾಲರ್ ಆಗಿದ್ದು, ಅಂಬಾನಿ ನಂತರದ ಎರಡನೇ ಶ್ರೀಮಂತ ಭಾರತೀಯರಾಗಿದ್ದಾರೆ.

83.4 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದ ಸಂಪತ್ತಿನೊಂದಿಗೆ, 65 ವರ್ಷದ ಅಂಬಾನಿ ವಿಶ್ವದ ಬಿಲಿಯನೇರ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.