ನವದೆಹಲಿ: ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿದರು. ಆ್ಯಪಲ್ ಕಂಪನಿಯು ಭಾರತದಲ್ಲಿ ತನ್ನ ಮೊದಲ ರಿಟೇಲ್ ಮಳಿಗೆಯನ್ನು ಮಂಗಳವಾರ ಆರಂಭಿಸಿದೆ.

‘ಬೆಚ್ಚನೆಯ ಸ್ವಾಗತಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು... ದೇಶದಾದ್ಯಂತ ಹೂಡಿಕೆ ಮಾಡಲು ನಾವು ಬದ್ಧರಾಗಿದ್ದೇವೆ’ ಎಂದು ಕುಕ್ ಅವರು ಟ್ವೀಟ್ ಮೂಲಕ ಹೇಳಿದ್ದಾರೆ. ತಾವು ಕುಕ್ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಮೋದಿ ಅವರೂ ಟ್ವೀಟ್ ಮಾಡಿದ್ದಾರೆ.

ಕುಕ್ ಅವರು 2016ರಲ್ಲಿ ಭಾರತಕ್ಕೆ ಬಂದಿದ್ದಾಗ ಕೂಡ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ‘ತಮ್ಮ ಕಂಪನಿಯ ಅಗತ್ಯಗಳಿಗೆ ಅನುಗುಣವಾಗಿ ಭಾರತದ ಕೆಲಸಗಾರರಿಗೆ ತರಬೇತಿ ನೀಡಲು ನೆರವು ಬೇಕು ಎಂದು ಕುಕ್ ಅವರು ಕೇಳಿಕೊಂಡಿದ್ದಾರೆ’ ಎಂದು ಮೂಲಗಳು ಹೇಳಿವೆ. ಯಾವ ಬಗೆಯ ಕೌಶಲಗಳನ್ನು ಕಂಪನಿಯು ಬಯಸುತ್ತದೆ ಎಂಬುದನ್ನು ತಿಳಿಸುವಂತೆ ಸರ್ಕಾರವು ಸೂಚಿಸಿದೆ ಎಂದು ಗೊತ್ತಾಗಿದೆ.

ಆ್ಯಪಲ್ ಕಂಪನಿಯು ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶೇಕಡ 4ರಷ್ಟು ಪಾಲು ಹೊಂದಿದೆ. ಮಾರುಕಟ್ಟೆ ಪಾಲನ್ನು ಹೆಚ್ಚು ಮಾಡಿಕೊಳ್ಳುವುದರ ಜೊತೆ, ಭಾರತದಲ್ಲಿ ಆ್ಯಪಲ್ ಉತ್ಪನ್ನಗಳನ್ನು ತಯಾರಿಸುವ ಉದ್ದೇಶ ಕೂಡ ಕಂಪನಿಗೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.