ನವದೆಹಲಿ: ವಿಮಾನ ಕಾರ್ಯಾಚರಣೆ ಸಮಯದ ಅವಧಿ ಹಾಗೂ ವಿಮಾನ ಸಿಬ್ಬಂದಿಯ ದಣಿವು ನಿರ್ವಹಣೆ ವ್ಯವಸ್ಥೆ ಸಂಬಂಧ ಇರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಏರ್ ಇಂಡಿಯಾಗೆ ₹80 ಲಕ್ಷ ದಂಡ ವಿಧಿಸಿದೆ.

ಜನವರಿಯಲ್ಲಿ ಏರ್‌ಇಂಡಿಯಾದ ಸ್ಪಾಟ್ ಆಡಿಟ್ ನಡೆಸಿದ್ದ ಡಿಜಿಸಿಎ, ಸಾಕ್ಷ್ಯಗಳನ್ನು ಹಾಗೂ ವರದಿಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಂಡಿದೆ.
.ಅಸಭ್ಯ ವರ್ತನೆ: ವಿಮಾನದಿಂದ ರೆಲಿಗೇರ್ ಮುಖ್ಯಸ್ಥೆಯನ್ನು ಇಳಿಸಿದ ಏರ್ ಇಂಡಿಯಾ.
60 ವರ್ಷಕ್ಕೂ ಮೇಲ್ಪಟ್ಟ ಇಬ್ಬರು ಪೈಲಟ್‌ಗಳು ಏಕಕಾಲದಲ್ಲಿ ವಿಮಾನ ಹಾರಿಸಿರುವ ಕೆಲವು ಘಟನೆಗಳು ಸಾಕ್ಷ್ಯಗಳು ಹಾಗೂ ವರದಿಗಳ ವಿಶ್ಲೇಷಣೆಯಲ್ಲಿ ಗೊತ್ತಾಗಿದೆ. ಸಿಬ್ಬಂದಿಗಳಿಗೆ ಅಗತ್ಯ ವಿಶ್ರಾಂತಿ, ದೂರದ ಪ್ರಯಾಣದ ಮುನ್ನ ಹಾಗೂ ಬಳಿಕ ನಿಡಬೇಕಿದ್ದ ವಿಶ್ರಾಂತಿ ಹಾಗೂ ಲೇ ಓವರ್ (ಪ್ರಯಾಣದ ನಡುವೆ ವಿಮಾನ ಬದಲಿಸುವಾಗ ಇರುವ ಸಮಯ) ಸಮಯದಲ್ಲಿ ನೀಡಬೇಕಿದ್ದ ವಿಶ್ರಾಂತಿ ನೀಡುವಲ್ಲಿ ಕೊರತೆ ಕಂಡು ಬಂದಿದೆ. ಇದು ನಿಯಮಗಳ ಉಲ್ಲಂಘನೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
.ಏರ್ ಇಂಡಿಯಾ ಸಿಬ್ಬಂದಿಗೆ ಹೊಸ ವಿನ್ಯಾಸದ ಸಮವಸ್ತ್ರ.
ಕೆಲಸದ ಅವಧಿ ಮೀರಿ ಕಾರ್ಯನಿರ್ವಹಿಸಿದ ಹಲವು ಘಟನೆಗಳು ಇವೆ. ಇವುಗಳನ್ನು ತರಬೇತಿ ಅವಧಿ ಎಂದು ನಮೂದು ಮಾಡಲಾಗಿದೆ ಎಂದು ಡಿಜಿಸಿಎ ಹೇಳಿದೆ.

ಈ ಬಗ್ಗೆ ಕಾರಣ ಕೇಳಿ ಮಾರ್ಚ್ 1ರಂದು ಏರ್ ಇಂಡಿಯಾಗೆ ನೋಟಿಸ್ ನೀಡಲಾಗಿತ್ತು.

ಇದಕ್ಕೆ ಏರ್ ಇಂಡಿಯಾ ನೀಡಿದ ಉತ್ತರ ತೃಪ್ತಿಕರವಾಗಿರದಿದ್ದರಿಂದ ₹80 ಲಕ್ಷ ದಂಡ ವಿಧಿಸಲಾಗಿದೆ.
.ಏರ್ ಇಂಡಿಯಾ ವಿಮಾನದಲ್ಲಿ ಮಲಯಾಳಂ ನಟಿಗೆ ಕಿರುಕುಳ: ದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.