ಮುಂಬೈ: ಖಾಸಗಿ ವಲಯದ ಎಕ್ಸಿಸ್ ಬ್ಯಾಂಕ್ 2023–24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಒಟ್ಟು ₹7,129 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹5,728 ಕೋಟಿ ಲಾಭ ಗಳಿಸಿತ್ತು ಎಂದು ಬ್ಯಾಂಕ್ ಷೇರುಪೇಟೆಗೆ ತಿಳಿಸಿದೆ.

ವರಮಾನವು ₹28,758 ಕೋಟಿಯಿಂದ ₹35,990 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್‌ನ ಬಡ್ಡಿ ವರಮಾನವು ಶೇ 11ರಷ್ಟು ಹೆಚ್ಚಳವಾಗಿ, ₹13,089 ಕೋಟಿಗೆ ಮುಟ್ಟಿದೆ. 2023–24ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹24,861 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 160ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಬ್ಯಾಂಕ್‌ನ ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಶೇ 2.02ರಿಂದ ಶೇ 1.43ಕ್ಕೆ ಇಳಿಕೆಯಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಹೊಸದಾಗಿ 12.40 ಲಕ್ಷ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.