ನವದೆಹಲಿ: ಬಜಾಜ್ ಆಟೊ ಕಂಪನಿಯು, 2024–25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ₹1,924 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ₹1,644 ಕೋಟಿ ಲಾಭಗಳಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 18ರಷ್ಟು ಏರಿಕೆಯಾಗಿದೆ. ಈ ತ್ರೈಮಾಸಿಕದಲ್ಲಿ ₹11,932 ಕೋಟಿ ವರಮಾನ ಗಳಿಸಲಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹10,312 ಕೋಟಿ ವರಮಾನ ಗಳಿಸಲಾಗಿತ್ತು ಎಂದು ಕಂಪನಿಯು, ಷೇರುಪೇಟೆಗೆ ತಿಳಿಸಿದೆ.

ದೇಶೀಯ ಮಟ್ಟದಲ್ಲಿ ವಾಹನಗಳ ಮಾರಾಟವು ಏರಿಕೆಯಾಗಿದೆ. ರಫ್ತು ಪ್ರಮಾಣದಲ್ಲೂ ಹೆಚ್ಚಳವಾಗಿರುವುದಿಂದ ಈ ಲಾಭ ಗಳಿಕೆ ಸಾಧ್ಯವಾಗಿದೆ ಎಂದು ಹೇಳಿದೆ.

ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ 10.27 ಲಕ್ಷ ವಾಹನಗಳು ಮಾರಾಟವಾಗಿದ್ದರೆ, ಈ ಬಾರಿ 11.02 ಲಕ್ಷ ವಾಹನಗಳು ಮಾರಾಟವಾಗಿವೆ. ಒಟ್ಟಾರೆ ಮಾರಾಟದಲ್ಲಿ ಶೇ 7ರಷ್ಟು ಹೆಚ್ಚಳವಾಗಿದೆ ಎಂದು ವಿವರಿಸಿದೆ.

ಮೊದಲ ತ್ರೈಮಾಸಿಕದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ವಾಹನಗಳ ಮಾರಾಟದಲ್ಲಿ ಶೇ 8ರಷ್ಟು ಏರಿಕೆಯಾಗಿದೆ. ಒಟ್ಟು 6.90 ಲಕ್ಷ ವಾಹನಗಳು ಮಾರಾಟವಾಗಿವೆ. ವಾಹನಗಳ ರಫ್ತಿನಲ್ಲೂ ಶೇ 7ರಷ್ಟು ಹೆಚ್ಚಳವಾಗಿದೆ. ಒಟ್ಟು 4.11 ಲಕ್ಷ ವಾಹನಗಳನ್ನು ರಫ್ತು ಮಾಡಲಾಗಿದೆ ಎಂದು ತಿಳಿಸಿದೆ.

ತ್ರೈಮಾಸಿಕ ಲಾಭದಲ್ಲಿ ಏರಿಕೆಯಾಗಿದೆ. ಆದರೆ, ವಿದ್ಯುತ್ಚಾಲಿತ ದ್ವಿಚಕ್ರ ವಾಹನಗಳ ಮಾರಾಟದ ವಹಿವಾಟನ್ನು ಸರಿದೂಗಿಸಲು ವೆಚ್ಚ ಕಡಿತ ಅನಿವಾರ್ಯವಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.