ನವದೆಹಲಿ: ‘ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಗಲ್ಫ್ ರಾಷ್ಟ್ರಗಳು ರಫ್ತು ಮತ್ತು ಆಮದು ವಹಿವಾಟುಗಳನ್ನು ಭಾರತದ ರೂಪಾಯಿಯಲ್ಲಿಯೇ ನಡೆಸಲು ಉತ್ಸುಕವಾಗಿವೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

‘ಹಲವು ಅಭಿವೃದ್ಧಿ ಹೊಂದಿದ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರ ವಹಿವಾಟನ್ನು ರೂಪಾಯಿಯಲ್ಲಿ ನಡೆಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ನಿರ್ವಹಣಾ ವೆಚ್ಚ ತಗ್ಗಲಿದೆ’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಈ ಸಂಬಂಧ ಬಾಂಗ್ಲಾ ಮತ್ತು ಶ್ರೀಲಂಕಾವು ಭಾರತದ ಜೊತೆಗೆ ಮಾತುಕತೆ ನಡೆಸಿವೆ. ಶೀಘ್ರವೇ, ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಗಲ್ಫ್ ರಾಷ್ಟ್ರಗಳು ಇದೇ ಹಾದಿಯನ್ನು ಎದುರು ನೋಡುತ್ತಿವೆ’ ಎಂದು ಹೇಳಿದ್ದಾರೆ.

ಸ್ಥಳೀಯ ಕರೆನ್ಸಿಗಳಲ್ಲಿ ದ್ವಿಪಕ್ಷೀಯ ವ್ಯಾಪಾರ ನಡೆದರೆ ಉಭಯ ರಾಷ್ಟ್ರಗಳಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂಬುದು ವಿದೇಶಗಳಿಗೆ ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ.

ಯುಎಇಯಿಂದ ಕಚ್ಚಾತೈಲ ಆಮದು ಮಾಡಿಕೊಂಡಿದ್ದ ಭಾರತವು ರೂಪಾಯಿ ಮೂಲಕವೇ ಹಣ ಪಾವತಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.