ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಮಹಾರಾಷ್ಟ್ರವು (ಬಿಒಎಂ) 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹1,327 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹920 ಕೋಟಿ ಲಾಭ ಗಳಿಸಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 44ರಷ್ಟು ಹೆಚ್ಚಳವಾಗಿದೆ. ಬಡ್ಡಿ ವರಮಾನದಲ್ಲಿ ಏರಿಕೆಯಾಗಿರುವುದೇ ಲಾಭ ಗಳಿಕೆಗೆ ಕಾರಣವಾಗಿದೆ ಎಂದು ಬ್ಯಾಂಕ್, ಷೇರುಪೇಟೆಗೆ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹5,736 ಕೋಟಿ ವರಮಾನ ಗಳಿಸಿತ್ತು. ಈ ಬಾರಿ ₹6,809 ಕೋಟಿ ಗಳಿಸಿದೆ.

‘ಬ್ಯಾಂಕ್ನ ನಿವ್ವಳ ಬಡ್ಡಿ ಲಾಭವು (ಎನ್ಐಎಂ) ಶೇ 3.88ರಿಂದ ಶೇ 3.98ಕ್ಕೆ ಹೆಚ್ಚಳವಾಗಿದೆ’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ನಿಧು ಸಕ್ಸೇನಾ ತಿಳಿಸಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹5 ಸಾವಿರ ಕೋಟಿಗೂ ಹೆಚ್ಚು ನಿವ್ವಳ ಲಾಭಗಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಆರ್ಥಿಕ ವರ್ಷದಲ್ಲಿ ₹4,055 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಬ್ಯಾಂಕ್ನ ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 2.19ರಿಂದ ಶೇ 1.84ಕ್ಕೆ ತಗ್ಗಿದೆ. ನಿವ್ವಳ ಎನ್ಪಿಎ ಶೇ 0.23ರಿಂದ ಶೇ 0.20ಕ್ಕೆ ಇಳಿಕೆಯಾಗಿದೆ. ಸಮರ್ಪಕ ಬಂಡವಾಳ ಅನುಪಾತವು (ಸಿಎಆರ್) ಶೇ 17.26ಕ್ಕೆ ಏರಿಕೆಯಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.