ನವದೆಹಲಿ: ‘ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್‌ಗಳು ನಾಲ್ಕು ಬ್ಯಾಂಕ್‌ಗಳಲ್ಲಿ ವಿಲೀನಗೊಂಡು ಏಪ್ರಿಲ್ 1ರಿಂದ ಕಾರ್ಯಾರಂಭ ಮಾಡಲಿವೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

‘ವಿಲೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಂಬಂಧಪಟ್ಟ ಬ್ಯಾಂಕ್‌ಗಳ ಆಡಳಿತ ಮಂಡಳಿಗಳು ಈಗಾಗಲೇ ಈ ಕುರಿತು ನಿರ್ಧಾರ ತೆಗೆದುಕೊಂಡಿವೆ’ ಎಂದು ಹೇಳಿದ್ದಾರೆ.

ಕಂಪನಿ ಕಾಯ್ದೆ ತಿದ್ದುಪಡಿ: ನಿಯಮಗಳ ಉಲ್ಲಂಘನೆಯನ್ನು ಅಪರಾಧಮುಕ್ತಗೊಳಿಸುವುದೂ ಸೇರಿದಂತೆ ಕಂಪನಿ ಕಾಯ್ದೆಗೆ ತಂದಿರುವ ಹಲವಾರು ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.

‘2013ರ ಕಂಪನಿ ಕಾಯ್ದೆಗೆ ತಂದಿರುವ 72 ಬದಲಾವಣೆಗಳಿಗೆ ಸಮ್ಮತಿ ದೊರೆತಿದೆ. ದಂಡ ಪಾವತಿಸಿ ಪ್ರಕರಣ ಇತ್ಯರ್ಥಪಡಿಸುವ ಅಪರಾಧಗಳಲ್ಲಿನ ದಂಡದ ಪ್ರಮಾಣ ತಗ್ಗಿಸಲಾಗಿದೆ. ಅನೇಕ ಸೆಕ್ಷನ್‌ಗಳಡಿ ಇದ್ದ ಜೈಲು ಶಿಕ್ಷೆಯ ಪ್ರಸ್ತಾವ ಕೈಬಿಡಲಾಗಿದೆ. ಈ ಎಲ್ಲ ಕ್ರಮಗಳು ಕಂಪನಿಗಳು ಸುಲಲಿತವಾಗಿ ವಹಿವಾಟು ನಡೆಸಲು ಹೆಚ್ಚು ಅನುಕೂಲತೆ ಕಲ್ಪಿಸಲಿವೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.