ನವದೆಹಲಿ: ಕಳೆದ ಎರಡು ಆರ್ಥಿಕ ವರ್ಷದಿಂದ ಬ್ಯಾಂಕ್‌ಗಳು ಸಾಲ ನೀಡಿಕೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಲು ಹರಸಾಹಸ ಪಡುತ್ತಿವೆ ಎಂದು ದೇಶೀಯ ಕ್ರೆಡಿಟ್ ರೇಟಿಂಗ್ಸ್ ಸಂಸ್ಥೆ ಇನ್ಫೋಮೆರಿಕ್ಸ್ ರೇಟಿಂಗ್ಸ್ ತಿಳಿಸಿದೆ.

ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ಗಳ ಸಾಲ ಮತ್ತು ಠೇವಣಿ ಅನುಪಾತ (ಸಿ:ಡಿ) ಹೆಚ್ಚುತ್ತಿದೆ. 2023–24ರಲ್ಲಿ ಶೇ 75.8ರಿಂದ ಶೇ 80.3ಕ್ಕೆ ಹೆಚ್ಚಳವಾಗಿದೆ. ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ ಶೇ 92.95ರಷ್ಟಿದ್ದ ಅನುಪಾತವು ಶೇ 95.94ಕ್ಕೆ ಏರಿಕೆಯಾಗಿದೆ. ಇದನ್ನು ಏಪ್ರಿಲ್‌ನಲ್ಲಿ ಪ್ರಕಟಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಸಿಕ ವರದಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿದೆ.

ತ್ರೈಮಾಸಿಕವಾರು ಲೆಕ್ಕಾಚಾರದಲ್ಲಿ ಬ್ಯಾಂಕ್‌ಗಳ ಸಾಲ ನೀಡಿಕೆ ಪ್ರಮಾಣದಲ್ಲಿ ಏರಿಕೆಯಾಗಿದ್ದರೆ, ಠೇವಣಿ ಸಂಗ್ರಹದಲ್ಲಿ ಇಳಿಕೆಯಾಗಿದೆ ಎಂದು ಹೇಳಿದೆ.

ಆದರೆ, ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ವೈಯಕ್ತಿಕ ಹೂಡಿಕೆದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ 30 ವರ್ಷದೊಳಗಿನ ಹೂಡಿಕೆದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.

2018–19ರಲ್ಲಿ ಷೇರುಪೇಟೆಯಲ್ಲಿ ನೋಂದಾಯಿತ ಹೂಡಿಕೆದಾರರ ಸಂಖ್ಯೆ ಶೇ 22.6ರಷ್ಟಿತ್ತು. 2024–25ನೇ ಸಾಲಿಗೆ ಶೇ 39.9ರಷ್ಟಕ್ಕೆ ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಇದೇ ಅವಧಿಯಲ್ಲಿ 30ರಿಂದ 39 ವರ್ಷದೊಳಗಿನ ಹೂಡಿಕೆದಾರರ ಸಂಖ್ಯೆ ಸ್ಥಿರವಾಗಿದೆ. 40 ವರ್ಷ ಮೇಲ್ಪಟ್ಟ ಹೂಡಿಕೆದಾರರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಿದೆ.

‘ಠೇವಣಿ ಮೊತ್ತ ಹೆಚ್ಚಳಕ್ಕೆ ಬ್ಯಾಂಕ್‌ಗಳು ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕ್ರಮವಹಿಸಬೇಕಿದೆ. ಸಾರ್ವಜನಿಕರಿಂದ ಸಣ್ಣ ಮೊತ್ತದ ಠೇವಣಿ ಸಂಗ್ರಹಕ್ಕೆ ಒತ್ತು ನೀಡಬೇಕು. ಬೃಹತ್ ಮೊತ್ತದ ಕಾರ್ಪೊರೇಟ್ ಠೇವಣಿಗಳನ್ನು ಆಕರ್ಷಿಸುವ ಬದಲು ಈ ಮಾರ್ಗ ಅನುಸರಿಸುವುದು ಒಳಿತು. ಇದು ದೇಶದ ಆರ್ಥಿಕ ಬೆಳವಣಿಗೆಗೂ ಸಹಕಾರಿಯಾಗಲಿದೆ’ ಎಂದು ಟ್ರೂ ನಾರ್ಥ್ ಫೈನಾನ್ಶಿಯಲ್ ಸರ್ವಿಸಸ್‌ನ ಸಿಇಒ ರೋಚಕ್ ಬಕ್ಷಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.