ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bengaluru Tech Summit: ಜಿಲ್ಲೆಗೊಂದು ನವೋದ್ಯಮ ಕೇಂದ್ರಕ್ಕೆ ಬೇಡಿಕೆ

Published : 21 ನವೆಂಬರ್ 2024, 20:45 IST
Last Updated : 21 ನವೆಂಬರ್ 2024, 20:45 IST
ಫಾಲೋ ಮಾಡಿ
Comments
ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ದೇಶ–ವಿದೇಶಗಳ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆದುಕೊಳ್ಳಲು ಸರ್ಕಾರ ಉತ್ತಮ ವೇದಿಕೆ ಕಲ್ಪಿಸಿದೆ. ಯಾವ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳಿವೆ ಎಂಬುದರ ಕುರಿತೂ ಸ್ಪಷ್ಟತೆ ಸಿಕ್ಕಿದೆ
ಮೈತ್ರಾ ಕೆ., ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಎಲೆಕ್ಟ್ರಾನಿಕ್‌ ಸಿಟಿ
ಬೆಂಗಳೂರು ಟೆಕ್‌ ಶೃಂಗದಲ್ಲಿ ಮಾಹಿತಿಯ ಜೊತೆಗೆ ಐಟಿ, ಬಯೋಟೆಕ್‌ ಕ್ಷೇತ್ರದಲ್ಲಿರುವ ಉದ್ಯೋಗ ಅವಕಾಶಗಳ ಕುರಿತು ನಮ್ಮಂತಹ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ. ಸರ್ಕಾರ ವಾರ್ಷಿಕ 10 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಒಪ್ಪಂದ ಮಾಡಿಕೊಂಡಿರುವುದು ಶ್ಲಾಘನೀಯ
ಮೆಲಿಶಾ ಕೆ. ಸನ್ನಿ, ಎಂಜಿನಿಯರಿಂಗ್‌ ವಿದ್ಯಾರ್ಥಿನಿ
ಕೃತಕ ಬುದ್ದಿಮತ್ತೆ (ಎಐ) ಆಧಾರಿತ ತಂತ್ರಜ್ಞಾನವನ್ನು ಯಾವ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳಿವೆಯೇ? ಎಂಬ ನಮ್ಮ ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡಿದ್ದೇವೆ
ಶಶಾಂಕ್‌, ಎಂಜಿನಿಯರಿಂಗ್‌ ವಿದ್ಯಾರ್ಥಿ ಬಿಎಂಎಸ್‌ಐಟಿ ಕಾಲೇಜು
ನಾನು ಎರಡು ವರ್ಷಗಳಿಂದ ಈ ಶೃಂಗಕ್ಕೆ ಬರುತ್ತಿದ್ದೇನೆ. ನನಗೆ ಏನೂ ಗೊತ್ತಿಲ್ಲವೆಂದು ಒಳಗಡೆ ಬಂದರೆ, ಇಲ್ಲಿಂದ ಜ್ಞಾನದ ಭಂಡಾರವನ್ನು ಹೊತ್ತುಕೊಂಡು ಹೊರಹೋಗಬಹುದು. ನಮ್ಮಂತಹ ವಿದ್ಯಾರ್ಥಿಗಳ ಕಲಿಕೆ ಮತ್ತು ಬೆಳವಣಿಗೆಗೆ ಇದು ಸಹಕಾರಿ.
ಪ್ರಥಮ್‌, ಎಂಜಿನಿಯರಿಂಗ್‌ ವಿದ್ಯಾರ್ಥಿ, ಶಿವಮೊಗ್ಗ
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳು ಈ ಶೃಂಗದಲ್ಲಿ ಪಾಲ್ಗೊಂಡಿವೆ. ಈ ಕಂಪನಿಗಳ ಮುಖ್ಯಸ್ಥರೊಂದಿಗೆ ಸಂವಾದ ನಡೆಸುವ ಅವಕಾಶ ನಮಗೆ ಸಿಕ್ಕಿದ್ದು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಯಾವ ಕೌಶಲಗಳನ್ನು ಬೆಳೆಸಿಕೊಳ್ಳಬೇಕೆಂಬ ಮಾಹಿತಿ ಲಭಿಸಿದೆ
ನಿಶಿತಾ, ವಿದ್ಯಾರ್ಥಿನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT