ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ನಿವ್ವಳ ಲಾಭವು, 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಶೇ 82ರಷ್ಟು ಏರಿಕೆಯಾಗಿದೆ.

ಏಪ್ರಿಲ್ ತ್ರೈಮಾಸಿಕದಲ್ಲಿ ಕಂಪನಿಯು ₹1,747 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಮೂರನೇ ತ್ರೈಮಾಸಿಕದಲ್ಲಿ 3,181.42 ಕೋಟಿಗೆ ಹೆಚ್ಚಳವಾಗಿದೆ. ಆದರೆ, ಜುಲೈ–ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹8,243.55 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಡಿಸೆಂಬರ್ ತ್ರೈಮಾಸಿಕದಲ್ಲಿ ಲಾಭವು ಕಡಿಮೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ 21 ತಿಂಗಳುಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿಲ್ಲ. ಇದು ಲಾಭ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಕಂಪನಿ ತಿಳಿಸಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಿಂದ ಬರುವ ತೆರಿಗೆ ಪೂರ್ವದ ಲಾಭದಲ್ಲೂ ಏರಿಕೆಯಾಗಿದೆ. ಕಳೆದ ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹2,618.95 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ₹4,372.93 ಕೋಟಿ ಆದಾಯ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.