ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹8,243 ಕೋಟಿ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ₹338 ಕೋಟಿಯಷ್ಟು ನಷ್ಟ ಆಗಿತ್ತು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಕಚ್ಚಾ ತೈಲ ದರ ಇಳಿಕೆ ಕಂಡಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ದರವನ್ನು ಕಡಿಮೆ ಮಾಡದ ಕಾರಣಕ್ಕಾಗಿ ಕಂಪನಿಯು ಈ ಪ್ರಮಾಣದ ಲಾಭ ಗಳಿಸುವಂತಾಗಿದೆ. ಆದರೆ, ಕಳೆದ ವರ್ಷ ಕಚ್ಚಾ ತೈಲ ದರ ಗರಿಷ್ಠ ಮಟ್ಟಕ್ಕೆ ತಲುಪಿದ್ದಾಗ ಇಂಧನ ಮಾರಾಟ ದರದಲ್ಲಿ ಏರಿಕೆ ಮಾಡದೇ ನಷ್ಟ ಆಗಿತ್ತು ಎಂದು ಕಂಪನಿ ತಿಳಿಸಿದೆ.

2023ರ ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಕಂಪನಿಯು ದಾಖಲೆಯ ₹18,888 ಕೋಟಿಯಷ್ಟು ಲಾಭ ಗಳಿಸಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವರಮಾನವು ₹1.28 ಲಕ್ಷ ಕೋಟಿಯಿಂದ ₹1.16 ಲಕ್ಷ ಕೋಟಿಗೆ ಇಳಿಕೆ ಕಂಡಿದೆ. 2022ರ ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ₹6,486 ಕೋಟಿಯಷ್ಟು ನಷ್ಟ ಕಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.