ನವದೆಹಲಿ: ಕೇಂದ್ರ ಸರ್ಕಾರವು ಆದಾಯ ಮತ್ತು ವೆಚ್ಚಗಳ ನಡುವಿನ ವಿತ್ತೀಯ ಕೊರತೆಯನ್ನು 2024–25ನೇ ಆರ್ಥಿಕ ಸಾಲಿಗೆ ಜಿಡಿಪಿಯ ಶೇ 4.9ರಷ್ಟಕ್ಕೆ ತಗ್ಗಿಸುವ ಗುರಿ ನಿಗದಿಪಡಿಸಿದೆ.

ಆದರೆ, ವಿತ್ತೀಯ ಹೊಣೆಗಾರಿಕೆ ಹಾಗೂ ಬಜೆಟ್ ನಿರ್ವಹಣೆ ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಶೇ 3ಕ್ಕಿಂತ ಹೆಚ್ಚಿರಬಾರದು.

ಫೆಬ್ರುವರಿಯಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್ನಲ್ಲಿ ವಿತ್ತೀಯ ಕೊರತೆಯನ್ನು ಪ್ರಸಕ್ತ ಆರ್ಥಿಕ ವರ್ಷಕ್ಕೆ ಶೇ 5.1ಕ್ಕೆ ತಗ್ಗಿಸುವ ಗುರಿ ಹೊಂದಲಾಗಿತ್ತು. ಪೂರ್ಣ ಬಜೆಟ್ನಲ್ಲಿ ಇದನ್ನು ಪರಿಷ್ಕರಿಸಲಾಗಿದೆ. 2025–26ನೇ ಆರ್ಥಿಕ ವರ್ಷದಲ್ಲಿ ಶೇ 4.5ಕ್ಕೆ ತಗ್ಗಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಿಂದ ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಸರ್ಕಾರವು ಮಾರುಕಟ್ಟೆಯಿಂದ ಸರಾಸರಿ ₹14.13 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸಲು ನಿರ್ಧರಿಸಿದೆ. ಒಟ್ಟು ನಿವ್ವಳ ಬಂಡವಾಳ ₹11.63 ಲಕ್ಷ ಕೋಟಿ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ದೇಶದ ಆರ್ಥಿಕತೆಯ ಬೆಳವಣಿಗೆಗೆ ಉತ್ತೇಜನ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ನೀಡುವ ಲಾಭಾಂಶಕ್ಕಿಂತಲೂ ಹೆಚ್ಚು ಹಣ ಸಂಗ್ರಹಿಸುವ ಗುರಿ ಹೊಂದಿದೆ. ಬಾಂಡ್ಗಳನ್ನು ವಿತರಣೆ ಮಾಡುವ ಮೂಲಕ ಈ ಮೊತ್ತ ಸಂಗ್ರಹಿಸಲು ತೀರ್ಮಾನಿಸಿದೆ.

₹10 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ ನಿರೀಕ್ಷೆ

ಸರಕು ಮತ್ತು ಸೇವಾ ತೆರಿಗೆಯಿಂದ 2024–25ನೇ ಆರ್ಥಿಕ ವರ್ಷದಲ್ಲಿ ₹10.68 ಲಕ್ಷ ಕೋಟಿ ವರಮಾನ ಸಂಗ್ರಹವಾಗಲಿದೆ ಎಂದು ಬಜೆಟ್ನಲ್ಲಿ ಅಂದಾಜಿಸಲಾಗಿದೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 11.6ರಷ್ಟು ಹೆಚ್ಚಿದೆ.

ಲಾಭಾಂಶ:

ಮಧ್ಯಂತರ ಬಜೆಟ್ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ 2024–25ನೇ ಆರ್ಥಿಕ ವರ್ಷದಲ್ಲಿ ₹1.02 ಲಕ್ಷ ಕೋಟಿ ಲಾಭಾಂಶದ ಗುರಿ ನಿಗದಿಪಡಿಸಿತ್ತು. ಆರ್ಬಿಐ ಮೇ ತಿಂಗಳಿನಲ್ಲಿ ಈ ಗುರಿ ಮೀರಿ ಕೇಂದ್ರಕ್ಕೆ ₹2.11 ಲಕ್ಷ ಕೋಟಿ ಲಾಭಾಂಶ ನೀಡಿದೆ. ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳಿಂದ ₹43,000 ಕೋಟಿ ಲಾಭಾಂಶವನ್ನು ನಿರೀಕ್ಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.