ನವದೆಹಲಿ: 2024–25ನೇ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ (ಅಕ್ಟೋಬರ್ನಿಂದ ಮಾರ್ಚ್) ವಸೂಲಾಗದೆ ಬಾಕಿ ಉಳಿದಿರುವ ಸಾಲದ ಪೈಕಿ ₹6 ಸಾವಿರ ಕೋಟಿ ಸಾಲವನ್ನು ವಸೂಲಿ ಮಾಡುವ ಗುರಿ ಹೊಂದಲಾಗಿದೆ ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

‘ಮೂರನೇ ತ್ರೈಮಾಸಿಕದಲ್ಲಿ ₹3 ಸಾವಿರ ಕೋಟಿ ಹಾಗೂ ನಾಲ್ಕನೇ ತ್ರೈಮಾಸಿಕದಲ್ಲಿ ಅಷ್ಟೇ ಮೊತ್ತದ ಬಾಕಿ ಸಾಲ ವಸೂಲಿಗೆ ನಿರ್ಧರಿಸಲಾಗಿದೆ’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಅವರು, ಪಿಟಿಐಗೆ ತಿಳಿಸಿದ್ದಾರೆ.

ಎರಡನೇ ತ್ರೈಮಾಸಿಕದಲ್ಲಿ ರೈಟ್ ಆಫ್ ಮೊತ್ತ ಸೇರಿ ₹2,905 ಕೋಟಿ ಸಾಲ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೆನರಾ ಬ್ಯಾಂಕ್ನ ಅಂಗಸಂಸ್ಥೆಯಾದ ಕೆನರಾ ರೊಬೆಕೊ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿಯು ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಬಂಡವಾಳ ಸಂಗ್ರಹಿಸಲು ನಿರ್ಧರಿಸಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಈ ಪ್ರಕ್ರಿಯೆ ಆರಂಭಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.