ಮುಂಬೈ: ‘ದೇಶವನ್ನು ₹ 350 ಲಕ್ಷ ಕೋಟಿ ಆರ್ಥಿಕತೆಯನ್ನಾಗಿ ರೂಪಿಸಲು ಉದ್ದಿಮೆ ಸ್ನೇಹಿ ನೀತಿಗಳನ್ನು ಜಾರಿಗೊಳಿಸುವ ಅಗತ್ಯವಿದೆ’ ಎಂದು ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಕೃಷ್ಣಮೂರ್ತಿ ಸುಬ್ರಮಣಿಯನ್ ಅಭಿಪ್ರಾಯಪಟ್ಟಿದ್ದಾರೆ.

‘ಬಂಡವಾಳಶಾಹಿಗಳಿಗೆ ಪೂರಕವಾದ ನೀತಿಗಳು ಉದ್ದಿಮೆ ಸ್ನೇಹಿ ನೀತಿಗಳಾಗಿ ಸಂಪೂರ್ಣವಾಗಿ ಬದಲಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಲಿದೆ. ಇಂತಹ ನೀತಿಗಳುದೇಶದಲ್ಲಿ ನ್ಯಾಯೋಚಿತವಾದ ಸ್ಪರ್ಧೆಯನ್ನು ಸೃಷ್ಟಿಸುವ ಮೂಲಕ ಮಾರುಕಟ್ಟೆಯಲ್ಲಿ ಕಾಣದ ಕೈಗಳ ಪ್ರಭಾವವನ್ನು ಕಡಿಮೆ ಮಾಡುತ್ತವೆ’ ಎಂದುಐಐಟಿ ಕಾನ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ‘ಅಸೆಂಬಲ್ ಇನ್ ಇಂಡಿಯಾ’ಗೆ ಒತ್ತು ನೀಡಲಾಗಿದೆ. ಇದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ‘ಭಾರತದಲ್ಲಿಯೇ ತಯಾರಿಸಿ’ಗೆ ಪರ್ಯಾಯ ಆಗಿರದೆ, ಅದಕ್ಕೆ ಪೂರಕವಾಗಿರಬೇಕು’ ಎಂದಿದ್ದಾರೆ.

‘ಭಾರತದಲ್ಲಿಯೇ ತಯಾರಿಸಿ’ ಅಭಿಯಾನಕ್ಕೆ ಹೊಸ ಆಯಾಮ ನೀಡುವ ಉದ್ದೇಶದಿಂದ‘ಅಸೆಂಬಲ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’ಗೆ ಹೆಚ್ಚು ಗಮನ ನೀಡುವಂತೆ2019–20ರ ಆರ್ಥಿಕ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.

ಭಾರತದಲ್ಲಿ ಬಿಡಿಭಾಗಗಳನ್ನು ಜೋಡಿಸಿ ಅದನ್ನುಜಾಗತಿಕ ಮಾರುಕಟ್ಟೆಗೆ ಪೂರೈಸುವ ಕೆಲಸ ಆಗಬೇಕಿದೆ.ಇದರಿಂದ ದೇಶದ ರಫ್ತು ವಹಿವಾಟು ಹೆಚ್ಚಾಗುವುದಲ್ಲದೆ, ಉದ್ಯೋಗ ಸೃಷ್ಟಿಯೂ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.