ನವದೆಹಲಿ: ಸೋನಿ ಮತ್ತು ಜೀ ಕಂಪನಿಗಳ ವಿಲೀನ ಒಪ್ಪಂದಕ್ಕೆ ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ಷರತ್ತುಬದ್ಧ ಒಪ್ಪಿಗೆ ನೀಡಿದೆ. ಈ ವಿಲೀನದ ಬಳಿಕ ದೇಶದ ಅತಿದೊಡ್ಡ ಮಾಧ್ಯಮ ಸಮೂಹ ಸೃಷ್ಟಿಯಾಗಲಿದೆ.

ಕಳೆದ ಸೆಪ್ಟೆಂಬರ್ನಲ್ಲಿ ಎರಡೂ ಕಂಪನಿಗಳು ವಿಲೀನ ಒಪ್ಪಂದವನ್ನು ಘೋಷಿಸಿದ್ದವು. ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಬೆಂಗಾಲ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳನ್ನು ಸೋನಿ ಕಾರ್ಪೊರೇಷನ್ ಒಡೆತನದ ಕಲ್ವರ್ ಮ್ಯಾಕ್ಸ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ನೊಂದಿಗೆ ಕೆಲವು ಬದಲಾವಣೆಗಳೊಂದಿಗೆ ವಿಲೀನಗೊಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ಸಿಸಿಐ ಟ್ವೀಟರ್ನಲ್ಲಿ ತಿಳಿಸಿದೆ.

ವಿಲೀನ ಒಪ್ಪಂದದಲ್ಲಿ ಯಾವೆಲ್ಲಾ ಬದಲಾವಣೆಗಳಿಗೆ ಸಿಸಿಐ ಸೂಚಿಸಿದೆ ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.