ನವದೆಹಲಿ: ಸಾಲದ ಮುಂದೂಡಲಾಗಿರುವ ಮರುಪಾವತಿ ಕಂತುಗಳಿಗೆ ಚಕ್ರಬಡ್ಡಿ ವಿಧಿಸುವ ಮತ್ತು ಮರುಪಾವತಿ ವಿಳಂಬ ಮಾಡಿದವರ ಕ್ರೆಡಿಟ್ ರೇಟಿಂಗ್ ಬದಲಿಸುವ ವಿಚಾರವಾಗಿ ಎರಡು ಮೂರು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

ಈ ವಿಚಾರವಾಗಿ ತನ್ನ ನಿರ್ಧಾರವನ್ನು ತಿಳಿಸುವಂತೆ ಮತ್ತು ಪ್ರಮಾಣಪತ್ರದ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೂ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

‘ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ತೀರ್ಮಾನ ಕೈಗೊಳ್ಳುವ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ. ಹಲವು ಆರ್ಥಿಕ ಪರಿಣಾಮಗಳ ಕಡೆಗೆ ಸರ್ಕಾರ ಗಮನ ಹರಿಸುತ್ತಿದೆ. ಅಕ್ಟೋಬರ್ 1ರ ವೇಳೆಗೆ ಈ ಕುರಿತ ಪ್ರಮಾಣಪತ್ರವನ್ನು ಸಲ್ಲಿಸಲಾಗುವುದು. ಅದರ ಪ್ರತಿಗಳನ್ನು ಇ–ಮೇಲ್ ಮೂಲಕ ಅರ್ಜಿದಾರರಿಗೆ ಕಳುಹಿಸಲಾಗುವುದು’ ಎಂದು ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ಗೆ ತಿಳಿಸಿದರು.

ಮುಂದಿನ ವಿಚಾರಣೆಯನ್ನು ಅಕ್ಟೋಬರ್ 5ರಂದು ನಡೆಸಲಾಗುವುದು ಎಂದು ತಿಳಿಸಿದ ಕೋರ್ಟ್, ಅದಕ್ಕೂ ಮೊದಲು ಪ್ರಮಾಣಪತ್ರದ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೆ ನೀಡುವಂತೆ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.