ನವದೆಹಲಿ: ‘ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ (ಪಿಎಸ್ಬಿ) ಸಾರ್ವಜನಿಕರ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವ ಪೀಯೂಷ್ ಗೋಯಲ್ ಭರವಸೆ ನೀಡಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿನ (ಪಿಎನ್ಬಿ) ₹ 13 ಸಾವಿರ ಕೋಟಿಗೂ ಹೆಚ್ಚಿನ ಹಗರಣ ಸೇರಿದಂತೆ ಬ್ಯಾಂಕ್ಗಳಲ್ಲಿ ಇತ್ತೀಚಿಗೆ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಸಚಿವರು ಈ ಭರವಸೆ ನೀಡಿದ್ದಾರೆ.

ಬ್ಯಾಂಕ್ ಮುಖ್ಯಸ್ಥರ ಜತೆ ಮಂಗಳವಾರ ಇಲ್ಲಿ ನಡೆದ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ‘ಬ್ಯಾಂಕ್ಗಳಲ್ಲಿ ಜನರು ಇರಿಸಿರುವ ಹಣ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಸಾರ್ವಜನಿಕರು ಬ್ಯಾಂಕ್ಗಳಲ್ಲಿ ಇರಿಸಿರುವ ವಿಶ್ವಾಸಕ್ಕೆ ಸರ್ಕಾರ ನೂರಕ್ಕೆ ನೂರರಷ್ಟು ಬೆಂಬಲವಾಗಿ ನಿಲ್ಲಲಿದೆ’ ಎಂದರು.

‘ಖಾಸಗಿ ಬ್ಯಾಂಕ್ಗಳಲ್ಲಿನ ಜನರ ಹಣ ಎಷ್ಟರಮಟ್ಟಿಗೆ ಸುರಕ್ಷಿತವಾಗಿದೆ ಎನ್ನುವುದರ ಬಗ್ಗೆ ನಾನು ಖಚಿತವಾಗಿ ಏನನ್ನೂ ಹೇಳಲಾರೆ. ಖಾಸಗಿ ಕಂಪನಿಗಳು ದೊಡ್ಡ ಮೊತ್ತದ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿವೆ. ಖಾಸಗಿ ಸಂಸ್ಥೆಗಳಿಂದಲೇ ವಂಚನೆ ಕೃತ್ಯಗಳು ನಡೆಯುತ್ತಿವೆ.

‘ಪಿಎಸ್ಬಿ’ಗಳ ಜತೆ ಪರಿಣಾಮಕಾರಿಯಾಗಿ ವ್ಯವಹರಿಸಲು ಕೇಂದ್ರೀಯ ಬ್ಯಾಂಕ್ಗೆ ಪರಮಾಧಿಕಾರ ಇಲ್ಲ ಎಂದು ಹೇಳಿದ್ದ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೋಯಲ್, ‘ಬ್ಯಾಂಕ್ಗಳನ್ನು ಸಮರ್ಥವಾಗಿ ನಿಯಂತ್ರಿಸಲು ಆರ್ಬಿಐ ಬಳಿ ಅಗತ್ಯ ಅಧಿಕಾರ ಇದೆ. ಅದಕ್ಕೆ ಹೆಚ್ಚುವರಿ ಅಧಿಕಾರ ಬೇಕು ಎಂದಾದರೆ ಈ ಬಗ್ಗೆಸರ್ಕಾರ ಮುಕ್ತ ಮನಸ್ಸಿನಿಂದ ಇದೆ.

‘ಪ್ರಾಮಾಣಿಕ ಉದ್ದಿಮೆ ಸಂಸ್ಥೆಗಳ ಸಾಲದ ಅಗತ್ಯ ಪೂರೈಸಲು ಪಿಎಸ್ಬಿಗಳು ಮುಂದಾಗಲಿವೆ. ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್ಎಂಇ) ಸಾಲ ನೀಡಿಕೆಯಲ್ಲಿ ಆದ್ಯತೆ ನೀಡಲಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.