ಬೆಂಗಳೂರು: ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಅಥವಾ ಕುಟುಂಬದ ಪಿಂಚಣಿದಾರರಿಗೆ ಡಿಜಿಟಲ್ ಜೀವಿತ ಪ್ರಮಾಣಪತ್ರವನ್ನು ಮನೆ ಬಾಗಿಲಿಗೆ ತಲುಪಿಸಲು ರಾಜ್ಯದ ಖಜಾನೆ ಆಯುಕ್ತರೊಂದಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ.

5.4 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಈ ಪ್ರಮಾಣಪತ್ರವು ತಲುಪಲಿದೆ. ಪೋಸ್ಟ್ಮ್ಯಾನ್ ಮೂಲಕ ಆಧಾರ್, ಮೊಬೈಲ್ ಸಂಖ್ಯೆ, ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ ದೃಢೀಕರಣ ನೀಡಿ, ಪ್ರಮಾಣಪತ್ರ ಪಡೆಯಬಹುದು ಎಂದು ಅಂಚೆ ಇಲಾಖೆಯ ಕರ್ನಾಟಕ ವೃತ್ತವು ಪ್ರಕಟಣೆಯಲ್ಲಿ ತಿಳಿಸಿದೆ.

ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ಮ್ಯಾನ್ ಮೂಲಕ ₹70 ಶುಲ್ಕ (ಜಿಎಸ್ಟಿ ಸೇರಿ) ನೀಡಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.