ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ (ಪಿಡಿಎಸ್) ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ವಿತರಿಸಲಾಗಿತ್ತು. ಆಧಾರ್ ಸಂಖ್ಯೆ ಆಧರಿತ ದೃಢೀಕರಣ ಹಾಗೂ ಇ–ಕೆವೈಸಿ (ಆಧಾರ್ ಆಧರಿತ ಹೆಬ್ಬೆಟ್ಟಿನ ದೃಢೀಕರಣ) ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ. ಇದರಿಂದ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಗಟ್ಟಲಾಗಿದೆ. ಜೊತೆಗೆ, ಅರ್ಹರಿಗೆ ಪಡಿತರ ಸಿಗಲು ನೆರವಾಗಿದೆ ಎಂದು ಹೇಳಿದೆ.

ಪಿಡಿಎಸ್ ವ್ಯವಸ್ಥೆಯ ಡಿಜಿಟಲೀಕರಣದ ಮೂಲಕ ಜಾಗತಿಕ ಮಟ್ಟದಲ್ಲಿ ಸರ್ಕಾರವು ಆಹಾರ ಭದ್ರತೆ ಕಾರ್ಯಕ್ರಮದಲ್ಲಿ ಹೊಸ ಹೆಗ್ಗುರುತು ಮೂಡಿಸಿದೆ. ಇಲ್ಲಿಯವರೆಗೆ 20.4 ಕೋಟಿ ಪಡಿತರ ಚೀಟಿಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ವಿವರಿಸಿದೆ.

ಪ್ರಸ್ತುತ ದೇಶದಲ್ಲಿ ಶೇ 98ರಷ್ಟು ಪಡಿತರ ವಿತರಣೆಯು ಆಧಾರ್ ದೃಢೀಕರಣದ ಮೂಲಕ ನಡೆಯುತ್ತಿದೆ. ಅನರ್ಹರಿಗೆ ಆಹಾರ ಧಾನ್ಯಗಳ ವಿತರಣೆ ಹಾಗೂ ಪಡಿತರ ಕಳ್ಳತನಕ್ಕೂ ತಡೆ ಬಿದ್ದಿದೆ ಎಂದು ಹೇಳಿದೆ.

ಆಹಾರ ಭದ್ರತೆ ದೃಷ್ಟಿಯಿಂದ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ. ಹಾಲಿ ಇರುವ ಕಾರ್ಡ್ಗಳ ಮೂಲಕ ಫಲಾನುಭವಿಗಳು ದೇಶದ ಯಾವ ನ್ಯಾಯಬೆಲೆ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾಗಿದೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.