ಬೆಂಗಳೂರು: ದೇಶದ ಷೇರುಪೇಟೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ನಡೆಸುತ್ತಿದ್ದು, ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಷೇರುಗಳನ್ನು ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಆದರೆ, ದೇಶಿ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ನಿರಂತರವಾಗಿ ಷೇರುಗಳನ್ನು ಖರೀದಿಸುತ್ತಿರುವುದರಿಂದಾಗಿ ಷೇರುಪೇಟೆಗಳು ಇಳಿಕೆ ಕಾಣುವುದು ತಪ್ಪಿದೆ.

ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ ಬಿಎಸ್‌ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿವೆ. ಬಿಎಸ್‌ಇ ಮಾರುಕಟ್ಟೆ ಬಂಡವಾಳ ಮೌಲ್ಯ ₹323.40 ಲಕ್ಷ ಕೋಟಿಗೆ ತಲುಪಿದ್ದು, ದಾಖಲೆ ಮಟ್ಟ ಇದಾಗಿದೆ.

ಭಾರತದ ಬಂಡವಾಳ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 15ರವೆರೆಗೆ ನಡೆದಿರುವ ವಹಿವಾಟಿನಲ್ಲಿ ಎಫ್‌ಪಿಐ ₹9,579 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದೇ ಅವಧಿಯಲ್ಲಿ ದೇಶಿ ಸಾಂಸ್ಥಿಕ ಹೂಡಿಕೆದಾರರು ₹8,309 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆ ಮೌಲ್ಯವು ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಮುಂದಿನ ದಿನಗಳಲ್ಲಿಯೂ ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಲು ಹೆಚ್ಚು ಗಮನ ನೀಡಲಿದ್ದಾರೆ. ಅಮೆರಿಕದ 10 ವರ್ಷಗಳ ಬಾಂಡ್ ಗಳಿಕೆಯು ಸದ್ಯ ಶೇ 4.28ರಷ್ಟು ಗರಿಷ್ಠ ಮಟ್ಟದಲ್ಲಿ ಇದೆ. ಅಮೆರಿಕದ ಡಾಲರ್ ಮೌಲ್ಯವೂ ಏರಿಕೆ ಕಾಣುತ್ತಿದೆ. ಈ ಕಾರಣಗಳಿಂದಾಗಿ ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡುವ ಪ್ರಮಾಣ ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕ್ ನಿಫ್ಟಿಯು 46 ಸಾವಿರದ ಗರಿಷ್ಠ ಮಟ್ಟವನ್ನು ತಲುಪಿದ್ದು, ಅಲ್ಪಾವಧಿಯಲ್ಲಿ 46,700 ರಿಂದ 47 ಸಾವಿರ ಅಂಶಗಳವರೆಗೆ ತಲುಪುವ ಸಾಧ್ಯತೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ರೂಪಕ್ ದೇ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.