ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2021-22ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಬಡ್ಡಿ ದರವನ್ನು ಶೇ 8.5ರಿಂದ ಶೇ 8.1ಕ್ಕೆ ಇಳಿಸಿದೆ.

ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕನಿಷ್ಠ ದರ ಇದಾಗಿದೆ. 1977-78ರಲ್ಲಿ ಶೇ 8ರಷ್ಟಾಗಿತ್ತು.

ಐದು ಕೋಟಿ ಚಂದಾದಾರರಿಗೆ ಇದು ಅನ್ವಯವಾಗಲಿದೆ. 2020-21ನೇ ಸಾಲಿನಲ್ಲಿ ಬಡ್ಡಿ ದರ ಶೇ 8.5 ಆಗಿತ್ತು.

ಇಪಿಎಫ್‌ಒ ಕೇಂದ್ರೀಯ ಮಂಡಳಿಯ ಟ್ರಸ್ಟಿಗಳ (ಸಿಬಿಟಿ) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈಗ ಅನುಮೋದನೆಗಾಗಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.