ನವದೆಹಲಿ: ಯಾವುದೇ ಮನವಿ ಪತ್ರ, ಗುರುತಿನ ಚೀಟಿ ಇಲ್ಲದೆಯೇ ₹2000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠವು ಅರ್ಜಿಯನ್ನು ಪರಿಶೀಲಿಸಿ ಈ ವಿಷಯದಲ್ಲಿ ಯಾವುದೇ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ಹೇಳಿದೆ.

ಬೇಸಿಗೆ ರಜೆಯ ನಂತರ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಈ ಅರ್ಜಿಯನ್ನು ವರ್ಗಾಯಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.

ಇಂತಹ ಮಹತ್ವದ ವಿಷಯವನ್ನು ಸುಪ್ರೀಂ ಕೋರ್ಟ್ ಪರಿಗಣಿಸದಿರುವುದು ದುರದೃಷ್ಟಕರ ಎಂದು ಅರ್ಜಿದಾರ, ವಕೀಲ ಅಶ್ವಿನಿ ಉಪಾಧ್ಯಾಯ ಹೇಳಿದ್ದಾರೆ.

ಎರಡನೇ ಬಾರಿಗೆ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿರುವ ಸುಪ್ರಿಂ ಕೋರ್ಟ್, ಇದು ನ್ಯಾಯಾಲಯವೇ ಹೊರತು ಸಾರ್ವಜನಿಕ ವೇದಿಕೆಯಲ್ಲ ಎಂದು ಹೇಳಿದೆ.

ಇದೇ ಮನವಿ ಕೋರಿ ಜೂನ್ 1ರಂದು ಸಲ್ಲಿಕೆಯಾಗಿದ್ದ ಮತ್ತೊಂದು ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಆಧಾರ್ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ₹2000 ಮುಖಬೆಲೆಯ ನೋಟುಗಳನ್ನು ಭಯೋತ್ಪಾದಕರು, ಅಪರಾಧಿಗಳು ವಿನಿಮಯ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.