ನವದೆಹಲಿ: ಕೇಂದ್ರ ಜಿಎಸ್ಟಿ ಅಧಿಕಾರಿಗಳು 2023–24ರ ಹಣಕಾಸು ವರ್ಷದಲ್ಲಿ ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ನ (ಐಟಿಸಿ) 9,190 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ, ಲೋಕಸಭೆಗೆ ಲಿಖಿತ ಉತ್ತರದಲ್ಲಿ ಸೋಮವಾರ ತಿಳಿಸಿದ್ದಾರೆ.

ನಕಲಿ ಇನ್ವಾಯ್ಸ್ ಸೃಷ್ಟಿಸಿ ₹36,374 ಕೋಟಿ ಮೊತ್ತದ ಜಿಎಸ್ಟಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 182 ಜನರನ್ನು ಬಂಧಿಸಲಾಗಿದೆ.

2022-23ರಲ್ಲಿ 7,231 ಪ್ರಕರಣ ದಾಖಲಾಗಿದ್ದು, ₹24,140 ಕೋಟಿ ನಕಲಿ ಐಟಿಸಿ ಪತ್ತೆಯಾಗಿದೆ. ಈ ಅವಧಿಯಲ್ಲಿ 152 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ನಕಲಿ ಐಟಿಸಿ ವಂಚಕರನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸ. ಕಾನೂನು ಜಾರಿ ಸಂಸ್ಥೆಗಳು ಸೇರಿದಂತೆ ಅನೇಕ ಮಧ್ಯಸ್ಥಗಾರರೊಂದಿಗಿನ ಸಮನ್ವಯದ ಮೂಲಕ ಇಂತಹ ಸವಾಲುಗಳನ್ನು ಎದುರಿಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.