ನವದೆಹಲಿ: ಕೇಂದ್ರ ಸರ್ಕಾರವು 16ನೇ ಹಣಕಾಸು ಆಯೋಗವನ್ನು ನವೆಂಬರ್ ಅಂತ್ಯದ ವೇಳೆಗೆ ರಚನೆ ಮಾಡುವ ನಿರೀಕ್ಷೆ ಇದೆ ಎಂದು ಹಣಕಾಸು ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಹೇಳಿದ್ದಾರೆ.

2026ರ ಏಪ್ರಿಲ್ 1ರಿಂದ ಐದು ಹಣಕಾಸು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆ ವರಮಾನವನ್ನು ರಾಜ್ಯಗಳಿಗೆ ಎಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎನ್ನುವುದನ್ನೂ ಒಳಗೊಂಡು ಹಲವು ವಿಷಯಗಳಲ್ಲಿ ಶಿಫಾರಸು ನೀಡಲಿದೆ.

15ನೇ ಹಣಕಾಸು ಆಯೋಗವು 2021–22ರಿಂದ 2025–26ರವರೆಗಿನ ಐದು ಹಣಕಾಸು ವರ್ಷಗಳಿಗೆ ಸಂಬಂಧಿಸಿದ ವರದಿಯನ್ನು 2020ರ ನವೆಂಬರ್ 9ರಂದು ಸಲ್ಲಿಸಿದೆ.

2021–22ರಿಂದ 2025–26ರವರೆಗೆ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆ ವರಮಾನದಲ್ಲಿ ರಾಜ್ಯಗಳಿಗೆ ಶೇಕಡ 42ರಷ್ಟು ಪಾಲು ನೀಡುವಂತೆ ಎನ್.ಕೆ. ಸಿಂಗ್ ನೇತೃತ್ವದ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದೆ. 14ನೇ ಆಯೋಗವು ಮಾಡಿದ್ದ ಶಿಫಾರಸಿನಲ್ಲಿಯೂ, ಇದೇ ಪ್ರಮಾಣದಲ್ಲಿ ಹಂಚಿಕೆ ಆಗಬೇಕು ಎಂದು ಹೇಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.