ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಿನಲ್ಲಿ ವಿತ್ತೀಯ ಕೊರತೆಯು ಬಜೆಟ್ ಅಂದಾಜಿನ ಶೇ 58.6ರಷ್ಟಾಗಿದೆ. ಮೌಲ್ಯದ ಲೆಕ್ಕದಲ್ಲಿ ₹ 4.66 ಲಕ್ಷ ಕೋಟಿಗೆ ತಲುಪಿದೆ ಎಂದು ಮಹಾಲೇಖಪಾಲರ (ಸಿಜಿಎ) ವರದಿಯಲ್ಲಿ ತಿಳಿಸಲಾಗಿದೆ.

ಲಾಕ್‌ಡೌನ್‌ನಿಂದಾಗಿ ತೆರಿಗೆ ಸಂಗ್ರಹದಲ್ಲಿ ಇಳಿಕೆಯಾಗಿದೆ. ಹೀಗಾಗಿ ವಿತ್ತೀಯ ಕೊರತೆ ಹೆಚ್ಚಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ವಿತ್ತೀಯ ಕೊರತೆಯು ಬಜೆಟ್ ಅಂದಾಜಿನ ಶೇ 52ರಷ್ಟಿತ್ತು.

2020–21ನೇ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯನ್ನು ₹ 7.96 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇ 3.5ರಲ್ಲಿ ನಿಯಂತ್ರಿಸುವ ಗುರಿಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ. ಆದರೆ, ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದಾಗಿ ಈ ಗುರಿಯನ್ನು ಮರುಪರಿಶೀಲನೆ ಮಾಡುವ ಸಾಧ್ಯತೆ ಇದೆ.

2019–20ರಲ್ಲಿ ಏಳುವರ್ಷಗಳ ಗರಿಷ್ಠ ಮಟ್ಟವಾದ ಶೇ 4.6ಕ್ಕೆ ಏರಿಕೆಯಾಗಿತ್ತು.

2020–21ಕ್ಕೆ ವಿತ್ತೀಯ ಕೊರತೆಯು ₹ 13 ಲಕ್ಷ ಕೋಟಿಗಳಷ್ಟಾಗಲಿದೆ (ಶೇ 6.7) ಎಂದು ಐಸಿಆರ್‌ಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.