ನವದೆಹಲಿ: ಹಣ ಅಕ್ರಮ ವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡುವಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಬಂಡವಾಳ ಮಾರುಕಟ್ಟೆಗಳಲ್ಲಿ ನಡೆಯುವ ಅನುಮಾನಾಸ್ಪದ ವ್ಯವಹಾರದ ಮೇಲೆ ಹಣಕಾಸು ಸಂಸ್ಥೆಗಳು ನಿಗಾವಹಿಸಬೇಕಿದೆ ಎಂದು ದೇಶದ ಹಣಕಾಸು ಗುಪ್ತಚರ ಘಟಕ (ಎಫ್‌ಐಯು) ಸೂಚನೆ ನೀಡಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಈ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಬಂಡವಾಳ ಮಾರುಕಟ್ಟೆಗಳು, ವಿಮಾ ಕಂಪನಿಗಳು, ಆನ್‌ಲೈನ್ ಪೇಮೆಂಟ್ ಕಂಪನಿಗಳು ಮತ್ತು ಕ್ರಿಪ್ಟೊ ಕರೆನ್ಸಿ ಸೇವೆ ಒದಗಿಸುವವರು, ಸಂಶಯವಾಗಿ ನಡೆಯುವ ವ್ಯವಹಾರವನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಹೇಳಿದೆ.

ದೇಶದ ಹಿತದೃಷ್ಟಿಯಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ. ಹಾಗಾಗಿ, ಹಣಕಾಸು ಸಂಸ್ಥೆಗಳು ಮತ್ತು ಮಧ್ಯಸ್ಥಿಕೆದಾರರು, ಸಂಶಯ ಮೂಡಿಸುವ ವ್ಯವಹಾರಗಳ ಬಗ್ಗೆ ವರದಿ ಸಲ್ಲಿಸುವುದು ಕಡ್ಡಾಯ. ಇಂತಹ ವರದಿಗಳ ವಿಶ್ಲೇಷಣೆ ಮೂಲಕ ದೇಶದ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.