ಬೆಂಗಳೂರು: ನೋಂದಣಿ ಆಗದೇ ಇರುವ ಆಹಾರ ಉತ್ಪನ್ನಗಳ ಬ್ರ್ಯಾಂಡ್‌ಗಳನ್ನು ತೆರಿಗೆ ವಿನಾಯಿತಿ ಪಟ್ಟಿಯಿಂದ ಕೈಬಿಡದೇ ಇರುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್‌ಕೆಸಿಸಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ನೋಂದಣಿ ಆಗದೇ ಇರುವ ಆಹಾರ ಉತ್ಪನ್ನಗಳಿಗೆ ತೆರಿಗೆ ವಿಧಿಸುವುದರಿಂದ ಅವುಗಳ ದರ ಹೆಚ್ಚಾಗಲಿದ್ದು ಜನರಿಗೆ ಹೊರೆಯಾಗಲಿದೆ. ಅಲ್ಲದೆ, ಇಂತಹ ಉತ್ಪನ್ನಗಳನ್ನು ತಯಾರಿಸುತ್ತಿರುವ ಸಣ್ಣ ಉದ್ದಿಮೆಗಳಿಗೂ ಸಮಸ್ಯೆಯಾಗಲಿದೆ ಎಂದು ಹೇಳಿದೆ.

ತಜ್ಞರು, ಉದ್ಯಮವಲಯ ಮತ್ತು ಗ್ರಾಹಕರ ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂದೂ ಅಭಿಪ್ರಾಯಪಟ್ಟಿದೆ.

ತೆರಿಗೆ ದರಗಳನ್ನು ಕಡಿಮೆ ಮಾಡುವ ಸಂಬಂಧ ರಚನೆ ಆಗಿರುವ ಸಮಿತಿಯು ನೋಂದಣಿ ಆಗದೇ ಇರುವ ಆಹಾರ ಉತ್ಪನ್ನಗಳ ಬ್ರ್ಯಾಂಡ್‌ಗಳನ್ನು ತೆರಿಗೆ ವಿನಾಯಿತಿ ಪಟ್ಟಿಯಿಂದ ಕೈಬಿಡುವ ಬಗ್ಗೆ ಆಲೋಚನೆ ನಡೆಸುತ್ತಿರುವುದಾಗಿ ವರದಿಯಾಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಎಫ್‌ಕೆಸಿಸಿಐ ಈ ಪತ್ರ ಬರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.