ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್‌ಕೆಸಿಸಿಐ) ಹುಬ್ಬಳ್ಳಿಯಲ್ಲಿ ಶನಿವಾರ ಮತ್ತು ಭಾನುವಾರ ‘ಜಿಲ್ಲಾ ಮಟ್ಟದ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ರಾಜ್ಯ ಸಮ್ಮೇಳನ, ಬಂಡವಾಳ ಹೂಡಿಕೆದಾರರ ಸಮಾವೇಶ’ವನ್ನು ಆಯೋಜಿಸಲಿದೆ.

ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಹಭಾಗಿತ್ವದಲ್ಲಿ ಈ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಹುಬ್ಬಳ್ಳಿಯ ಡೆನಿಸನ್ ಹೊಟೆಲ್‌ನಲ್ಲಿ ಇದು ನಡೆಯಲಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ, ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಐ.ಎಸ್. ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಕೈಗಾರಿಕಾ ನೀತಿ, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಸಾಧ್ಯತೆಗಳ ಬಗ್ಗೆ, ಒಂದು ಜಿಲ್ಲೆ ಒಂದು ಉತ್ಪನ್ನ ವಿಚಾರ ಕುರಿತು ಭಾಷಣಗಳು ಇರಲಿವೆ ಎಂದು ಪ್ರಸಾದ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.