ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಪೇಟೆಗಳಲ್ಲಿ ಡಿಸೆಂಬರ್ 1 ರಿಂದ 23ರವರೆಗೆ ನಡೆದ ವಹಿವಾಟಿನಲ್ಲಿ ₹11,557 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ನವೆಂಬರ್ ತಿಂಗಳಿನಲ್ಲಿ ₹36,200 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರು.

‘ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಚೀನಾ ಮತ್ತು ಜಗತ್ತಿನ ಇನ್ನೂ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಆತಂಕದ ನಡುವೆಯೂ ಹೂಡಿಕೆಯನ್ನು ಮುಂದುವರಿಸಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

‘ಹೀಗಿದ್ದರೂ ನಿವ್ವಳ ಹೂಡಿಕೆ ಪ್ರಮಾಣವು ಡಿಸೆಂಬರ್ 23ಕ್ಕೆ ಕೊನೆಗೊಂಡ ವಾರದಲ್ಲಿ ₹1 ಸಾವಿರ ಕೋಟಿಗೂ ಕಡಿಮೆ ಆಗಿದೆ. ಅದಕ್ಕೂ ಹಿಂದಿನ ವಾರದಲ್ಲಿ ₹6,055 ಕೋಟಿ ಹೂಡಿಕೆ ಮಾಡಿದ್ದರು. ಈಚಿನ ಬೆಳವಣಿಗೆಗಳು ಮತ್ತು ಅನಿಶ್ಚಿತ ಪರಿಸ್ಥಿತಿಗಳಿಂದಾಗಿ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎನ್ನುವುದನ್ನು ನಿವ್ವಳ ಹೂಡಿಕೆಯು ಸೂಚಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

‘ಅಮೆರಿಕದ ಆರ್ಥಿಕ ಬೆಳವಣಿಗೆಯ ಅಂಕಿ–ಅಂಶಗಳು ಹಾಗೂ ಕೋವಿಡ್‌ಗೆ ಸಂಬಂಧಿಸಿದ ಬೆಳವಣಿಗೆಗಳು ಅಲ್ಪಾವಧಿಯಲ್ಲಿ ಷೇರುಪೇಟೆಗೆ ವಿದೇಶಿ ಬಂಡವಾಳ ಒಳಹರಿವನ್ನು ನಿರ್ಧರಿಸಲಿವೆ’ ಎಂದು ಜಿಯೋಜಿತ್ ಹಣಕಾಸು ಸೇವೆಗಳ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ಹೇಳಿದ್ದಾರೆ.

‘ಡಿಸೆಂಬರ್‌ನಲ್ಲಿ 15 ದಿನಗಳ ವಹಿವಾಟಿನಲ್ಲಿ ವಾಹನ, ಬಂಡವಾಳ ಸರಕು, ಎಫ್‌ಎಂಸಿಜಿ ಮತ್ತು ರಿಯಲ್ ಎಸ್ಟೇಟ್ ಷೇರುಗಳನ್ನು ಖರೀದಿಸಿದ್ದು, ಗ್ರಾಹಕ ಬಳಕೆ ವಸ್ತುಗಳು, ತೈಲ ಮತ್ತು ಅನಿಲ, ವಿದ್ಯುತ್ ಹಾಗೂ ಹಣಕಾಸು ವಲಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ’ ಎಂದು ವಿಜಯಕುಮಾರ್ ಮಾಹಿತಿ ನೀಡಿದ್ದಾರೆ.

2022ರಲ್ಲಿ ಈವರೆಗೆ ಈಕ್ವಿಟಿ ಮಾರುಕಟ್ಟೆಯಿಂದ ₹1.21 ಲಕ್ಷ ಕೋಟಿ ಬಂಡವಾಳವನ್ನು ವಿದೇಶಿ ಹೂಡಿಕೆದಾರರು ಹಿಂದಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.