ನವದೆಹಲಿ: ಇ–ಕಾಮರ್ಸ್ ಕಂಪನಿಗಳ ಉಗ್ರಾಣದ ಮೇಲೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಯುಕ್ತರು ನಿಗಾವಹಿಸಬೇಕು. ಗ್ರಾಹಕರಿಗೆ ಸುರಕ್ಷಿತ ಆಹಾರ ಪೂರೈಕೆ ಸಂಬಂಧ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ರೂಪಿಸಬೇಕು ಎಂದು ಭಾರತದ ಆಹಾರ ಸುರಕ್ಷತೆ ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಸೂಚಿಸಿದೆ.

ಪ್ರಾಧಿಕಾರದ ಕೇಂದ್ರೀಯ ಸಲಹಾ ಸಮಿತಿಯ 45ನೇ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ದೇಶನ ನೀಡಲಾಗಿದೆ.

ನವೆಂಬರ್ನಿಂದ ಮಾರ್ಚ್ವರೆಗೆ ದೇಶದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಜನರು ಹೆಚ್ಚಾಗಿ ಭೇಟಿ ನೀಡುತ್ತಾರೆ. ಹಾಗಾಗಿ, ಈ ಪ್ರದೇಶಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಸುರಕ್ಷತೆ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಸಂಚಾರ ಪ್ರಯೋಗಾಲಯ ಸೇವೆ ಬಳಸಿಕೊಂಡು ಸ್ಥಳದಲ್ಲಿಯೇ ಆಹಾರವನ್ನು ಪರೀಕ್ಷಿಸಬೇಕು ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.