ನವದೆಹಲಿ: ಬಂಡವಾಳ ಸಂಗ್ರಹಿಸಲು ವಿದೇಶಿ ಬಾಂಡ್ ಬಿಡುಗಡೆ ಮಾಡುವ ನಿರ್ಧಾರವನ್ನು ಇಂಧನ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಸಮರ್ಥಿಸಿಕೊಂಡಿದ್ದಾರೆ.

‘ಇದೊಂದು ಉತ್ತಮ ನಿರ್ಧಾರ. ಇದರಿಂದ ಹಲವು ರೀತಿಯ ಪ್ರಯೋಜನಗಳಿವೆ. ಆಪತ್ತು ಕಡಿಮೆ. ನಾನು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಆಗಿದ್ದಾಗ ಸರ್ಕಾರದಲ್ಲಿ ಇದ್ದ ಯಾರೊಬ್ಬರೂ ಅದರ ಬಗ್ಗೆ ಪ್ರಶ್ನೆ ಮಾಡಿದ್ದನ್ನು ಕೇಳಿಲ್ಲ’ ಎಂದು ಗರ್ಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿದೇಶಿ ಬಾಂಡ್ಗಳನ್ನು ನೀಡುವ ಆಲೋಚನೆಯನ್ನು ಹಲವರು ಟೀಕಿಸಿದ್ದಾರೆ. ಇದರಿಂದ ಆಗಲಿರುವ ಪರಿಣಾಮಗಳ ಬಗ್ಗೆ ಆರ್ಥಿಕ ವ್ಯವಹಾರಗಳ ಇಲಾಖೆಯು ಸರಿಯಾಗಿ ಅಧ್ಯಯನ ನಡೆಸಿಲ್ಲ ಎನ್ನುವ ಆಕ್ಷೇಪಗಳು ಕೇಳಬಂದಿವೆ. ಈ ಹಿನ್ನೆಲೆಯಲ್ಲಿ ಗರ್ಗ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.